ಬೆಳ್ತಂಗಡಿ : ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ- ಐವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ,ಜು. 14 : ದಿಡುಪೆಯ ಜಲಪಾತದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ನಂತರ ಬೆಳ್ತಂಗಡಿ ಪೊಲೀಸರು ಐವರನ್ನು ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವ ಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್‌ ಹಾಗೂ ಇತರರ ವಿರುದ್ಧ ಪ್ರಕರಣ‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಹೋಗಿದ್ದು, ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬರವು ವೇಳೆ‌ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.

ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ‌ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.