ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ

ಬೆಂಗಳೂರು, ಏ. 09 : ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಈ ವರ್ಷ, ಶೇಕಡಾ 86 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 7,10,363 ವಿದ್ಯಾರ್ಥಿಗಳಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರೀ ಉತ್ತೀರ್ಣ ಶೇಕಡಾವಾರು 73.45 ರಷ್ಟಿದ್ದು, ಈ ವರ್ಷ ಏರಿಕೆ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.

ವಿಜಯನಗರ  ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !