ಮಂಗಳೂರು : ನಾಳೆ ಜುಲೈ 7 ರಂದು ದಕ್ಷಿಣ ಕನ್ನಡ-ಉಡುಪಿಗೆ ರೆಡ್ ಅಲರ್ಟ್ – ಭೂಕುಸಿತದ ಮುನ್ನೆಚ್ಚರಿಕೆ !

Advertisement

ಮಂಗಳೂರು, ಜು. 6 : ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜುಲೈ 7 ರಂದು ರೆಡ್ ಅಲರ್ಟ್ ಘೋಷಸಲಾಗಿದೆ. ಉಳಿದೆಡೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9 ಹಾಗೂ 10 ರ ಬಳಿಕ ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮತ್ತೆ ಮಳೆ ಪ್ರಮಾಣ ಇಳಿಕೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Advertisement

ಜುಲೈ 7 ರಂದು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದ್ದು ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ.

Advertisement

ಜುಲೈ 8 ಬುಧವಾರದಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿಭಾರಿ ಮಳೆಯ ಮುನ್ಸೂಚನೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗೂ ಭಾರಿ ಮಳೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಭೂಕುಸಿತದ ಮುನ್ನೆಚ್ಚರಿಕೆ

ಜುಲೈ 7 ರಿಂದ 11 ರವರೆಗೆ ಪಶ್ಚಿಮ ಘಟ್ಟದ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆಯನ್ನು ಕೊಡಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ