ಮಂಗಳೂರು : ರಸ್ತೆ ಬದಿ ತ್ಯಾಜ್ಯ ಎಸೆಯುವ ಮತ್ತು ಸುಡುವವರ ವಿರುದ್ಧ ಪ್ರಕರಣ ದಾಖಲಿಸಿ – ಜಿಪಂ ಸಿಇಒ ಸೂಚನೆ

ಮಂಗಳೂರು, ಏ. 03 : ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಪಂ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೆ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲು ದ.ಕ. ಜಿಪಂ ಸಿಇಒ ನರ್ವಡೆ ನಾಯಕ ಕಾರ್ಬಾರಿ ಸೂಚಿಸಿದರು.

ಜಿಲ್ಲೆಯ ಎಲ್ಲಾ ತಾಪಂ ಇಒ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಅವರು ವೀಡಿಯೋ ಸಭೆ ನಡೆಸಿ ಮಾತನಾಡಿದರು.

ಪ್ರತೀ ತಿಂಗಳ 1 ಮತ್ತು 3ನೇ ಶನಿವಾರ ಆಯೋಜಿಸುವ ಸ್ವಚ್ಛ ಶನಿವಾರ-ಸ್ವಚ್ಛತಾ ಕಾರ್ಯದಂದು ಗ್ರಾಪಂಗಳು ತಮ್ಮ ವ್ಯಾಪ್ತಿಯ ಎಲ್ಲಾ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು. ಸ್ವಚ್ಛ ಸಂಕೀರ್ಣ ಹೊಂದಿರದ 63 ಗ್ರಾಪಂಗಳಲ್ಲಿ ಘಟಕ ನಿರ್ಮಾಣದ ಬಗ್ಗೆ ತಾಪಂ ಅನಿಬರ್‌ಂಧಿತ ನಿಧಿ ಮತ್ತು ಗ್ರಾಪಂಗಳಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿ ಕನಿಷ್ಟ 1,000 ಚದರ ಅಡಿ ವಿಸ್ತೀರ್ಣದ ಘಟಕ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸುವಂತೆ ಜಿಪಂ ಸಿಇಒ ಸೂಚಿಸಿದರು.

ನೈರ್ಮಲ್ಯ ತ್ಯಾಜ್ಯ ನಿರ್ವಹಣೆಗಾಗಿ ಮೊದಲ ಹಂತದಲ್ಲಿ 92 ಗ್ರಾಪಂಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ತ್ಯಾಜ್ಯ ನಿರ್ವಹಣಾ ಸಂಸ್ಥೆಯೊಂದಿಗೆ 48 ಗ್ರಾಪಂಗಳು ಕೂಡಲೇ ಒಪ್ಪಂದ ಮಾಡಿಕೊಳ್ಳಬೇಕು. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಈಗಾಗಲೇ ಹೊರಡಿಸಲಾಗಿರುವ ಸುತ್ತೋಲೆಯಂತೆ ಗ್ರಾಪಂಗಳಲ್ಲಿ ಈ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಮಾರಾಟ, ವಿತರಣೆ ಮಾಡುವುದರ ನಿಯಂತ್ರಣಕ್ಕಾಗಿ ಪರಿಶೀಲನೆ, ದಾಳಿ ನಡೆಸಿ ದಂಡ ವಿಧಿಸಲು ಮತ್ತು ಪರ್ಯಾಯ ವಸ್ತುಗಳ ಬಳಕೆಯನ್ನು ಹೆಚ್ಚಿಸಲು ಕ್ರಮವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಬೇಕು. ದಂಡ ಸಂಗ್ರಹಣೆಗಾಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಪಂಗಳಿಗೆ ಗುರಿ ನಿಗದಿಪಡಿಸಲು ಸಲಹೆ ನಿಡಿದರು.

ಸಭೆಯಲ್ಲಿ ದ.ಕ. ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ್, ಯೋಜನಾ ಅಧಿಕಾರಿ ಇ. ಜಯರಾಮ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಮತ್ತಿತರರು ಭಾಗವಹಿಸಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.