ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿ !

ಬೆಂಗಳೂರು, ಮೇ. 30 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಡಿಕೆ ಶಿವಕುಮಾರ್ ಅವರ ನೇತೃತ್ವದ ನಿಯೋಗವು ಶನಿವಾರ ರಾಜ್ಯಪಾಲರನ್ನು ಭೇಟಿಯಾಗಿ, ಪ್ರಮಾಣ ವಚನದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿ ಹೇಳಿದೆ.

Advertisement

ಡಿಕೆ ಶಿವಕುಮಾರ್ ಅವರೊಂದಿಗೆ ಕೆಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕಳೆದ ಗುರುವಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಬಗ್ಗೆ ಮಾತುಕತೆ ನಡೆಯುತ್ತಿದೆ. ಶನಿವಾರ (ಮೇ 30) ಸಂಜೆ ಶಾಸಕಾಂಗ ಸಭೆ ಕರೆಯಲಾಗಿದ್ದು, ಅಲ್ಲಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಅಧಿಕೃತ ಘೋಷಣೆ ಮಾಡಲಾಗುತ್ತದೆ.

ಶಿವಕುಮಾ‌ರ್ ಅವರು ಬಹಳ ಧಾರ್ಮಿಕ ವ್ಯಕ್ತಿಯಾಗಿದ್ದು, ತಮ್ಮ ಜ್ಯೋತಿಷಿ ದ್ವಾರಕನಾಥ್ ಅವರೊಂದಿಗೆ ಸಮಾಲೋಚಿಸಿದ ನಂತರ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಅಧಿಕಾರದ ಹಗ್ಗಜಗ್ಗಾಟದ ನಂತರ, ಕಾಂಗ್ರೆಸ್ ನಾಯಕತ್ವವು ಅಂತಿಮವಾಗಿ ಡಿಕೆ ಶಿವಕುಮಾರ್ ಪರವಾಗಿ ಕರೆ ನೀಡಿ, ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಕೇಳಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.