ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ – ಡಿಕೆ ಶಿವಕುಮಾರ್ ಶಪಥ !

ಬೆಂಗಳೂರು, ಮೇ. 16 : ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಟೌನ್‌ಶಿಫ್‌ ನಿರ್ಮಾಣಕ್ಕೆ ಶಪಥ ಮಾಡಿದ್ದಾರೆ.

Advertisement

ಬಿಡದಿ ಟೌನ್‌ಶಿಪ್‌ಗೆ ಕುಮಾರಸ್ವಾಮಿ ಅವರ ವಿರೋಧಕ್ಕೆ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ,”ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ,” ಎಂದು ಪ್ರಶ್ನಿಸಿದರು.

”ಯೋಜನೆಗೆ ಭೂಮಿ ಬಿಟ್ಟುಕೊಡುವಂತೆ ನಾನೇ ಖುದ್ದಾಗಿ ರೈತರ ಮನವೊಲಿಸುತ್ತೇನೆ. ಸಮಯ, ದಿನಾಂಕ ಗೊತ್ತುಪಡಿಸಿ ರೈತರ ಮುಂದೆ ಹೋಗುತ್ತೇನೆ. ರೈತರು ನನಗೆ ಎರಡೇಟು ಹೊಡೆಯಬಹುದು ಅಷ್ಟೇ ತಾನೇ? ಬಟ್ಟೆ ಹರಿಯಬಹುದು, ಕಲ್ಲೆಸೆಯಬಹುದು, ಧಿಕ್ಕಾರ ಹಾಕಬಹುದು. ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನೆ. ಮುಂದಿನ ದಿನಗಳಲ್ಲಿಈ ರೈತರು ಮತ್ತು ಅವರ ಮಕ್ಕಳ ಭವಿಷ್ಯ ಮುಖ್ಯ. ಮುಂದಿನ 20 ವರ್ಷಗಳ ನಂತರ ಬಿಡದಿ ಮತ್ತು ಬೆಂಗಳೂರು ದಕ್ಷಿಣದ ಜನರು ನನ್ನ ಕೆಲಸವನ್ನು ನೆನಪಿಸಿಕೊಳ್ಳುತ್ತಾರೆ. ಭೂಮಿಯನ್ನು ಡಿನೋಟಿಫೈ ಮಾಡಲು ನಾನಂತೂ ತಯಾರಿಲ್ಲ” ಎಂದು ಸ್ಪಷ್ಟಪಡಿಸಿದರು.

ಭೂ ಗ್ಯಾರಂಟಿ

”ಜನಸಾಮಾನ್ಯರು ಸಂಪಾದಿಸಿದ ಆಸ್ತಿಗಳಿಗೆ ಸರಿಯಾದ ರೀತಿಯಲ್ಲಿದಾಖಲೆಗಳನ್ನು ಒದಗಿಸಿಕೊಡಬೇಕು ಎಂದು ಆರನೇ ಗ್ಯಾರಂಟಿಯಾಗಿ ‘ಭೂಮಿ ಗ್ಯಾರಂಟಿ’ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಜನರ ಮನೆ ಬಾಗಿಲಿಗೆ ಇ-ಖಾತೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ. ‘ಬಿ’ ಯಿಂದ ‘ಎ’ ಖಾತೆಗೆ ಬದಲಾವಣೆ ಮಾಡಿಕೊಡುತ್ತಿದ್ದೇವೆ,” ಎಂದು ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.