ಬೆಂಗಳೂರು : ಧರ್ಮಸ್ಥಳ ಗ್ರಾಮದ 74 ಅಸಹಜ ಸಾವಿನ ಪ್ರಕರಣ – 2010ರವರೆಗಿನ ಎಲ್ಲಾ ದಾಖಲೆಗಳನ್ನು ನಾಶಪಡಿಸಲಾಗಿದೆ ಹೈಕೋರ್ಟ್ ಗೆ ಮಾಹಿತಿ ನೀಡಿದ ಸರಕಾರ

ಬೆಂಗಳೂರು, ಮಾ. 19 : ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆದರೆ, 2010ರವರೆಗಿನ ಎಲ್ಲಾ ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯ ಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ, ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂದು ಇರಬೇಕಲ್ಲವೇ?” ಎಂದು ನ್ಯಾಯಪೀಠ ಕೇಳಿತು. ಅದಕ್ಕೆ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂಬುದನ್ನು ವಿಸ್ತ್ರತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್ ಸಲ್ಲಿಸಲಾಗಿದೆ. 2023ರ ನ. 23ರಂದು ಸರಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲಾ ಮಾಡಬಹುದು ಅದನ್ನು ಮಾಡಲಾಗಿದೆ ಎಂದರು.

ಅರ್ಜಿಯಲ್ಲಿ ಪ್ರಶ್ನಿಸಲಾದ 74 ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗಿನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಜು. 7ಕ್ಕೆ ಮುಂದೂಡಿತು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.