ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಬೃಹತ್ ರಕ್ತದಾನ ಶಿಬಿರ

ಧರ್ಮಸ್ಥಳ, ಫೆ. 11 : ಗ್ರಾಮ ಪಂಚಾಯತ್ ಧರ್ಮಸ್ಥಳ ಆಶ್ರಯದಲ್ಲಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ರಕ್ತ ನಿಧಿ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ವಿಭಾಗಗಳು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ( ರಿ ),ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಸೇವಾಭಾರತಿ(ರಿ). ಕನ್ಯಾಡಿ-II, ವೀರಕೇಸರಿ ಬೆಳ್ತಂಗಡಿ, ಆದಿ ದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು, ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ಫೆಬ್ರವರಿ 10 ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

Advertisement

ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ವಿಮಲಾ ರವರು ರಕ್ತದಾನ ಶಿಬಿರವನ್ನು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಶುಭಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಪಿ ಶ್ರೀನಿವಾಸ್ ರಾವ್ ಮಾತನಾಡಿ ರಕ್ತದಾನ ಶ್ರೇಷ್ಠದಾನ ರಕ್ತದಾನ ಮಾಡುವುದರಿಂದ ಅದೆಷ್ಟೋ ಜೀವವನ್ನು ಉಳಿಸಬಹುದು. ರಕ್ತದ ಅಗತ್ಯವಿರುವ ವ್ಯಕ್ತಿ ಪ್ರಸವ ವೇದನೆಯಿಂದ ಬಳಲುತ್ತಿರುವ ತಾಯಿಯಾಗಿರಬಹುದು, ಸಂಸಾರದ ಇಡೀ ಹೊಣೆಯು ತನ್ನ ಮೇಲಿದ್ದು ಅಪಘಾತಕ್ಕೆ ಗುರಿಯಾಗಿ ಬಳಲುತ್ತಿರುವವನಾಗಿರಬಹುದು, ತೀವ್ರ ರಕ್ತಸ್ರಾವದಿಂದ ಅಪಾಯದ ಅಂಚಿನಲ್ಲಿರುವ ಮುಂದಿನ ಪೀಳಿಗೆಯ ತರುಣನಾಗಿರಬಹುದು, ಸಕಾಲದಲ್ಲಿ ಸಿಗುವ ರಕ್ತ ಇಂತಹ ವ್ಯಕ್ತಿಗಳ ಅಮೂಲ್ಯ ಜೀವವನ್ನು ಉಳಿಸಬಲ್ಲುದು. ಗ್ರಾಮ ಪಂಚಾಯತ್ ಇತರ ಸಂಘ ಸಂಸ್ಥೆಗಳೊಂದಿಗೆ ಸೇರಿಕೊಂಡು ಅತ್ಯುತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರು ಹಾಗೂ ನೋಟರಿ ವಕೀಲರಾದ ಲI ಮುರಳಿ ಬಳಿಪ , ಶ್ರೀ ಕ್ಷೇತ್ರ ಧರ್ಮಸ್ಥಳ ವಿಭಾಗದಿಂದ ಶ್ರೀ ಭುಜಬಲಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಮುರಳಿಧರದಾಸ್, ಶ್ರೀ ದಿನೇಶ್ ರಾವ್, ಶ್ರೀಮತಿ ಸುನಿತಾ ಶ್ರೀಧರ್, ಶ್ರೀಮತಿ ಲಕ್ಷ್ಮಿ, ಶ್ರೀಮತಿ ವಸಂತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಿಜನಲ್ ಡೈರೆಕ್ಟರ್ ಶ್ರೀ ಜಯರಾಮ್, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾದ ಶ್ರೀ ಪ್ರೀತಂ, ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯಾಧಿಕಾರಿ ಡಾ. ಪ್ರಜ್ವಲ್, ಕನ್ಯಾಡಿ ಸೇವಾಭಾರತಿ ಆರೋಗ್ಯ ವಿಭಾಗದ ಸಂಚಾಲಕರಾದ ಶ್ರೀ ಅಖಿಲೇಶ್ ಶೆಟ್ಟಿ, ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಡಿ ಅಶೋಕನಗರ, ಬೆಳ್ತಂಗಡಿ ಲಿಯೋ ಕ್ಲಬ್ ನ ಕಾರ್ಯದರ್ಶಿ ಶ್ರೀ ದೀಕ್ಷಿತ್, ಚಾಮುಂಡೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀ ಉಮಾನಾಥ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಮಾಜಿ ಪ್ರಾಂತ್ಯ ಅಧ್ಯಕ್ಷರಾದ ಲI ವಸಂತ ಶೆಟ್ಟಿ ಶ್ರದ್ಧಾ, ಸೇವಾಭಾರತಿಯ ಅನುಸರಣೆ ಮತ್ತು ಹಣಕಾಸು ವ್ಯವಸ್ಥಾಪಕ ಶ್ರೀ ಮೋಹನ್ ಎಸ್, ಶೌರ್ಯ ವಿಪತ್ತು ನಿರ್ವಹಣೆ ತಂಡದ ಅಧ್ಯಕ್ಷರು ಪದಾಧಿಕಾರಿಗಳು , ಸಂಜೀವಿನಿ ಒಕ್ಕೂಟದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಸಿಬ್ಬಂದಿ ವರ್ಗ, ಧರ್ಮಸ್ಥಳ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಚಾಲಕರು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸುಧಾಕರ ಗೌಡ ಪೂರ್ಜೆ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಸ್ವಾಗತಿಸಿದರು, ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಧ್ಯವಾದವಿತ್ತರು. ಕಾರ್ಯಕ್ರಮವನ್ನು ನಾಡಗೀತೆಯೊಂದಿಗೆ ಪ್ರಾರಂಭಿಸಿ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಳಿಸಲಾಯಿತು. ಒಟ್ಟು 105 ಯೂನಿಟ್ಸ್ ರಕ್ತ ಸಂಗ್ರಹಣೆಯಾಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.