ಬೆಳ್ತಂಗಡಿ : ಸಂತೆಕಟ್ಟೆ ಮೃತದೇಹ ಪತ್ತೆ ಪ್ರಕರಣ – ಬೀದಿ ನಾಯಿ ಕಡಿತದಿಂದ ರೇಬಿಸ್ ರೋಗಕ್ಕೆ ತುತ್ತಾಗಿ ಬಲಿ !

ಬೆಳ್ತಂಗಡಿ, ಮೇ 12 : ತಿಂಗಳ ಹಿಂದೆ ಬೀದಿ ನಾಯಿ ಕಡಿತಕ್ಕೊಳಗಾಗಿದ್ದ ವೃದ್ಧರೊಬ್ಬರು ರೆಸಿಬ್ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಸೋಮ (60 ವ) ಎಂಬವರಿಗೆ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ಕಳೆದ ತಿಂಗಳು ಬೀದಿ ನಾಯಿ ಕಚ್ಚಿದ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ಇದೀಗ ರೆಬಿಸ್ ರೋಗಕ್ಕೆ ತುತ್ತಾಗಿ ಮೇ 12 ರಂದು ಸಂತೆಕಟ್ಟೆ ಭಾರತ್ ಚಿತ್ರಮಂದಿರದ ಪಕ್ಕದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ.

Advertisement



ಸೋಮ ಅವರ ಕಾಲಿನಲ್ಲಿ ನಾಯಿ ಕಚ್ಚಿರುವ ಮೂರು ಗಾಯಗಳು ಪತ್ತೆಯಾಗಿದ್ದು. ಅವರು ಬೀದಿ ನಾಯಿ ಕಚ್ಚಿದ ಬಳಿಕ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದರು ಎಂದು ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಇಂದು ಮಧ್ಯಾಹ್ನ ಸಮಯ ಅಪರಿಚಿತ ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ಸಾಯಿ ರಾಮ್ ಆಂಬುಲೆನ್ಸ್ ಚಾಲಕ ಮಾಲಕ ಪವನ್ ಬಂಗೇರ ಅವರು ಪೊಲೀಸರ ಉಪಸ್ಥಿತಿಯಲ್ಲಿ ಮೃತದೇಹ ಸಾಗಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.