ಮಂಗಳೂರು : ದೋಣಿ ಮಗುಚಿಬಿದ್ದು ಇಬ್ಬರು ಯುವಕರು ನದಿ ಪಾಲು !

ಮಂಗಳೂರು, ಏ. 01 : ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್‌ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು.

Advertisement

ಬುಧವಾರ ಮುಂಜಾನೆ ಸುಮಾರು 1:30ರ ವೇಳೆಗೆ ಗಣೇಶ್, ರಾಯಲ್ ಹಾಗೂ ನಿತೇಶ್ ಫಲ್ಗುಣಿ ನದಿಗೆ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದೋಣಿ ಹಠಾತ್ತನೆ ನದಿಯಲ್ಲಿ ಮಗುಚಿ ಬಿದ್ದಿದೆ. ಈ ಸಮಯ ಈಜಲು ಬಾರದೆ ಗಣೇಶ್ ಹಾಗೂ ರಾಯಲ್ ನೀರುಪಾಲಾಗಿದ್ದು, ನಿತೇಶ್ ಈಜಿ ದಡ ಸೇರಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ತೀವ್ರ ಶೋಧ ಕಾರ್ಯ ನಡೆಸಿದ್ದು ಈ ವೇಳೆ ಗಣೇಶ್ ಎಂಬಾತನ ಮೃತದೇಹ ಪತ್ತೆಯಾಗಿದೆ.ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.