ದೇವನಹಳ್ಳಿ : ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ – ವಿದೇಶಿ ಮೂಲದ ವ್ಯಕ್ತಿಯ ಬಂಧನ

ದೇವನಹಳ್ಳಿ, ಜ. 01 : ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Advertisement

ನೈಜೀರಿಯಾ ಮೂಲದ ಡ್ರಗ್ಸ್ ಪೆಡ್ಡರ್ ವಿಮಾನ ನಿಲ್ದಾಣದ ಹಿಂಭಾಗದ ಗೇಟ್ ಸಮೀಪ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ, ದೇವನಹಳ್ಳಿ ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಅನುಮಾನಾಸ್ಪದವಾಗಿ ಡ್ರಗ್ಸ್ ಖರೀದಿದಾರರನ್ನು ಸೆಳೆಯುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ ಎಂಡಿಎಂಎ (MDMA) ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.