ಮಂಗಳೂರು:ಕಾಲೇಜು ವಿದ್ಯಾರ್ಥಿಗಳಿಗೆ ದಿಢೀರ್ ಡ್ರಗ್ ಟೆಸ್ಟ್: 159ರಲ್ಲಿ ಒಬ್ಬ ವಿದ್ಯಾರ್ಥಿ ಪಾಸಿಟಿವ್..!!

Advertisement

ಮಂಗಳೂರು, ಜುಲೈ 28 : ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು.

Advertisement


ನಗರದ ಕೊಟೆಕಾರ್ ಬೀರಿ ಹಾಗೂ ಕೊಣಾಜೆ ಬಂಟ್ಸ್ ಭವನ ಸಮೀಪ ಈ ವಿಶೇಷ ಕಾರ್ಯಾಚರಣೆ ನಡೆಯಿತು. ದಕ್ಷಿಣ ಹಾಗೂ ಕೇಂದ್ರ ಉಪವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರ (ACP) ನೇತೃತ್ವದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Advertisement


ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಖಾಸಗಿ ಹಾಗೂ ಕಾಲೇಜು ಬಸ್‌ಗಳನ್ನು ತಡೆದು, ವಿದ್ಯಾರ್ಥಿಗಳಿಗೆ ಮಲ್ಟಿ-ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ಪರೀಕ್ಷೆ ನಡೆಸಲಾಯಿತು.


ಕೊಟೆಕಾರ್ ಬೀರಿ ಪ್ರದೇಶದಲ್ಲಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೇಂಟ್ ಅಲೋಶಿಯಸ್, ಪಿ.ಎ. ಕಾಲೇಜು, ಬಿಯರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ 72 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಇವರಲ್ಲಿ 71 ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿ ಡ್ರಗ್ ಸೇವನೆ ಮಾಡಿರುವುದು ಪತ್ತೆಯಾಗಿದೆ.


ಇದೇ ವೇಳೆ ಕೊಣಾಜೆ ಬಂಟ್ಸ್ ಭವನ ಸಮೀಪ ಪಿ.ಎ. ಕಾಲೇಜಿನ ಎರಡು ಬಸ್‌ಗಳನ್ನು ತಡೆದು 87 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಎಲ್ಲರೂ ನೆಗೆಟಿವ್ ಎಂದು ವರದಿಯಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ