ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿ – ಸಹ ಸವಾರ ಸಾವು, ಸವಾರ ಗಂಭೀರ

ಬೆಳ್ತಂಗಡಿ, ಮಾ. 30 : ಸವಾರನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಮಾರ್ಚ್ 28ರ ತಡರಾತ್ರಿ ಸಂಭವಿಸಿದೆ.

Advertisement

ಲಾಯಿಲ ಗ್ರಾಮದ ಅಮ್ಮಣ್ಣಂಗಡಿ ನಿವಾಸಿ ಚಂದ್ರಶೇಖರ್ ಅವರ ಪುತ್ರ ನಿತೇಶ್ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ನಿವಾಸಿ ಲಿಖಿತ್ (20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಉಜಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಶನಿವಾರ ತಡರಾತ್ರಿ ಸುಮಾರು 12:30ರ ಸುಮಾರಿಗೆ ಕಾರ್ಯಕ್ರಮವೊಂದನ್ನು ಮುಗಿಸಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾಲೇಜು ರಸ್ತೆಯ ಪಂಚಮಿ ಲಾಡ್ಜ್ ಎದುರು ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಬಲವಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.