ಕೊಕ್ಕಡ : ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಅಪಹರಣಕ್ಕೆ ಯತ್ನ – ಶೈಕ್ ಮುಕ್ತಾರ್ ವಿರುದ್ಧ ಪ್ರಕರಣ !

Advertisement

ಕೊಕ್ಕಡ, ಆ. 13 : ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿಕೊಂಡು ಅಪಹರಿಸಲಾಗಿದೆ ಎಂಬ ಮಾಹಿತಿಯ ಮೇರೆಗೆ ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಗುಂಪೊಂದು ತಡೆದು, ಪ್ರಶ್ನಿಸಿ ಹಲ್ಲೆ ನಡೆಸಿದ ಆರೋಪ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ.

Advertisement

ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು ಚಾಲಕನ ವಿರುದ್ಧವೂ ಅಪಹರಣ ಪ್ರಕರಣ ದಾಖಲಾಗಿದೆ.

Advertisement

ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ನೀಡಿದ ದೂರಿನಂತೆ, ಅವರು ಆಗಸ್ಟ್ 11ರ ರಾತ್ರಿ ತಮ್ಮ ಪರಿಚಯಸ್ಥರ ಅಪ್ರಾಪ್ತ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನ ಕಡೆಗೆ ತೆರಳುತ್ತಿದ್ದರು. ಈ ವೇಳೆ ಕೊಕ್ಕಡ ಕಾಪಿನಬಾಗಿಲಿನಲ್ಲಿ ಕಾರು ತಡೆದು ನಿಲ್ಲಿಸಿದ ಗುಂಪೊಂದು ಶೈಕ್ ಮುಕ್ತಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದೆ ಎಂದು ದೂರು ನೀಡಲಾಗಿದೆ. ಈ ದೂರಿನನ್ವಯ ಕೊಕ್ಕಡದ ಧನುಷ್ (23), ದಿನೇಶ್ ಚಾರ್ಮಾಡಿ (45), ಪೂರ್ಣಕ್ಷ ಬಿ ಪುದುವೆಟ್ಟು (40), ಸೂರಜ್ ಕೊಕ್ಕಡ (25), ಮತ್ತು ರಂಜಿತ್ ಬಂಡಾರಿ ಕೊಕ್ಕಡ (29) ಅವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿಯ ತಾಯಿಯಿಂದ ಪ್ರತಿದೂರು :

ಇದೇ ಘಟನೆಗೆ ಸಂಬಂಧಿಸಿದಂತೆ, ಶೈಕ್ ಮುಕ್ತಾರ್ ಅವರು ತಮ್ಮ ಮಗಳನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿಕೊಂಡು ಅಪಹರಿಸಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಶೈಕ್ ಮುಕ್ತಾರ್ ವಿರುದ್ದ ಎಫ್‌ಐಆರ್’ ದಾಖಲಾಗಿದ್ದು, ಇದರ ಬಗ್ಗೆ ತನಿಖೆ ಮುಂದುವರಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ