ಗುರುವಾಯನಕೆರೆ, ಜು 7 : “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು,ಈ ಕಾಲೇಜಿನಿಂದ ವಿದ್ಯಾರ್ಜನೆ ಪಡೆದು ಹೊರಹೊಮ್ಮುತ್ತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಲ್ಲರು ಯಾಕಂದರೆ ಆರೋಗ್ಯವಂತ ಸಮಾಜ ನಿರ್ಮಾಣ ಎಕ್ಸೆಲ್ ನಂತಹ ಶಿಕ್ಷಣ ಸಂಸ್ಥೆಯಿಂದ ಸಾಧ್ಯವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ ಯವರು ಶೈಕ್ಷಣಿಕ ಸಾಧಕರನ್ನು ಅಭಿನಂದಿಸಿದರು.

ಎಕ್ಸೆಲ್ ಪಿ ಯು ಕಾಲೇಜು ಗುರುವಾಯನಕೆರೆ,ಇಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳ ನೇತೃತ್ವದಿಂದ ಹಮ್ಮಿಕೊಂಡಿದ್ದ ಶೃಂಗ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಿಕ್ಷಣದ ಉದ್ದೇಶ ಕೇವಲ ಜ್ಞಾನವನ್ನು ಪಡೆಯುವುದಲ್ಲ, ಭವಿಷ್ಯದ ಸಮಾಜವನ್ನು ನಿರ್ಮಾಣ ಮಾಡುವುದಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ಅಮೇರಿಕಾದ ,ನ್ಯೂಯಾರ್ಕ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ರವೀಶ್ ಮಯ್ಯ ರವರು ವಿದ್ಯಾರ್ಥಿಗಳು ನಾಳಿನ ಭವಿಷ್ಯದ ಸೃಷ್ಟಿಕರ್ತರು ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ರನ್ನು ಆದರ್ಶವಾಗಿಸಿಕೊಂಡು ಮುಂದಿನ ಭವಿಷ್ಯವನ್ನು ಸುಭದ್ರವಾಗಿ ನಿರ್ಮಾಣ ಮಾಡಿಕೊಳ್ಳಬೇಕೆಂದು ಹಿತನುಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ಇಲ್ಲಿನ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ವಿದ್ಯಾರ್ಥಿಗಳನ್ನು ಕುರಿತು ಆಕಾಶದಲ್ಲಿ ಹಾರುವ ಹಕ್ಕಿಗಳ ಹಾಗೆ ನಮ್ಮ ಕನಸುಗಳು ಸದಾ ಮೇಲ್ಮುಖವಾಗಿ ಇರಬೇಕು ಎಂದು ಸ್ಪೂರ್ತಿದಾಯಕ ಮಾತು ಗಳೊಂದಿಗೆ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ರವರು ಶೈಕ್ಷಣಿಕ ಸಾಧಕರಿಗೆ ಸನ್ಮಾನವನ್ನು ಮಾಡಿ ಅಭಿನಂದಿಸಿದರು.
ವಿಶ್ರಾಂತ ಅಭಿಯಂತರರು ಹಾಗೂ ಅಳದಂಗಡಿ ಶ್ರೀ ಸತ್ಯ ದೇವತಾ ದೇವಸ್ಥಾನ ಆಡಳಿತ ಮೊಕೆಸ್ತರರಾದ ಶ್ರೀ ಶಿವಪ್ರಸಾದ್ ಅಜಿಲರವರು ಶೈಕ್ಷಣಿಕ ವಿದ್ಯಾರ್ಥಿಗಳನ್ನು ಮನತುಂಬಿ ಅಭಿನಂದಿಸಿದರು.

” ಸಾಧನೆ ವ್ಯಕ್ತಿಯ ಹೊಣೆಗಾರಿಕೆಯನ್ನು ವಿಶಾಲಗೊಳಿಸುತ್ತದೆ’ ಸಾಧನೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಸಾಧಿಸಬೇಕೆನ್ನುವ ಛಲ ಇನ್ನಷ್ಟು ವೃದ್ಧಿಯಾಗಲಿ ಎಂದು ಶ್ರೀ ಸುಮಂತ್ ಕುಮಾರ್ ಜೈನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.
ಈ ಕಾರ್ಯಕ್ರಮದ ಭಾಗವಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ಪ್ರತಿ ಬಗ್ಗೆ ವೇದಿಕೆಯಾಗಿದ್ದ ಈ ಕಾರ್ಯಕ್ರಮದಲ್ಲಿ ನೃತ್ಯ, ಗಾಯನ ಸಮೂಹ ಗಾಯನ, ವಿವಿಧ ರೂಪಕಗಳು, ಭರತನಾಟ್ಯ, ಹುಲಿ ಕುಣಿತ, ಕೊಡವ ನೃತ್ಯ ಹೀಗೆ ವೈವಿಧ್ಯತೆಯ ಕ್ರಮಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಚಾಲನೆ ನೀಡಿದರು. ಪ್ರಾಚಾರ್ಯರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರೆ ಉಪ ಪ್ರಾಚಾರ್ಯರಾದ ಶ್ರೀ ರೋಹಿತ್ ರವರು ವಂದಿಸಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಸನ್ನ ಭೋಜ, ಅರುಣ್ ಕ್ರಾಸ್ಟೋಲಿನ್ , ಅನನ್ಯ ಜೈನ್ ಮತ್ತು ಕನ್ನಡ ಉಪನ್ಯಾಸಕರಾದ ಮೊಹಮ್ಮದ್ ಮುನೀರ್ ಇಂಗ್ಲೀಷ್ ಉಪನ್ಯಾಸಕಿ ಅಂಜನಿ ರಾವ್ ಅವರು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ಶ್ರೀ ಡಾ ಪ್ರಜ್ವಲ್ ಕಜೆ , ಎಕ್ಸೆಲ್ ಟೆಕ್ನೊ ಸ್ಕೂಲ್ ಮುಖ್ಯೋಪಾಧ್ಯಾಯರಾದ ಸುಮಿತ್ರಾ, ಆಡಳಿತಾಧಿಕಾರಿ ಕೀರ್ತಿನಿಧಿ ಜೈನ್, ಸಂಯೋಜಕರಾದ ನಿಶಾ ಪೂಜಾರಿ, ಶ್ರೀನಿಧಿ, ವೇಣೂರು ಎಕ್ಸೆಲ್ ಸ್ಕೂಲ್ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್,ನಿಲಯ ಮೇಲ್ವಿಚಾರಕರಾದ ಮಲ್ಲೇಶ್ ಜೈನ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು, ಪೋಷಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.


