ಬಂಟ್ವಾಳ : ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಡುಮದ್ದು ಸ್ಫೋಟ – ಆರೋಪಿಯ ವಿಚಾರಣೆ

ಬಂಟ್ವಾಳ, ಮಾ. 07 : ವಿಟ್ಲ, ಮುಡೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಸುಡುಮದ್ದುಗಳು ಸ್ಪೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Advertisement

ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿ ತಾಧಿಕಾರಿ ಸತೀಶ್ ಸುರ್ವಣ (50) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಅವರು ವಿಟ್ಲ ಮುನ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಾರ್ಚ್ 6ರಂದು ಸಂಜೆ ವಿಟ್ಲ ಮುಡೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಸುಡುಮದ್ದು ಸ್ಪೋಟಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ, ಸತೀಶ್ ಸುರ್ವಣ ಅವರು ಕಂದಾಯ ನಿರೀಕ್ಷಕ ರವಿ ಅವರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ವೇಳೆ ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ಸಂಗ್ರಹಿಸಿ ಇಟ್ಟಿರುವುದು ಪತ್ತೆಯಾಯಿತು. ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯಿಂದ ಸುಡುಮದ್ದುಗಳನ್ನು ದಾಸ್ತಾನು ಮಾಡಲಾಗಿದ್ದು, ಇದೇ ವೇಳೆ ಅವು ಸ್ಪೋಟಗೊಂಡಿರುವುದಾಗಿ ತಿಳಿದುಬಂದಿದೆ.
ಸ್ಪೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 58/2026 ರಂತೆ Explosives Act 1884ರ ಕಲಂ 9B ಹಾಗೂ BNS 288 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿತ ಅಬ್ದುಲ್ ಗಫೂರ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.