ಬೆಳ್ತಂಗಡಿ : ಬೆಂಕಿ ಅವಘಡ – ದಿನಸಿ ಅಂಗಡಿ ಸಂಪೂರ್ಣ ಭಸ್ಮ

Advertisement

ಬೆಳ್ತಂಗಡಿ, ಆ. 21 : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಿನಸಿ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

Advertisement

ಬೆಂದ್ರಾಳ ನಿವಾಸಿ ಶರೀಫ್ ಅವರ ಒಡೆತನದ ಅಂಗಡಿಯಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, . ಜ್ವಾಲೆಗಳು ಅಂಗಡಿ ಮತ್ತು ಕಟ್ಟಡವನ್ನು ಬೇಗನೆ ವ್ಯಾಪಿಸಿದ್ದರಿಂದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಮುಂದಾದರು.

Advertisement

ಅವರ ಸಕಾಲಿಕ ಕಾರ್ಯಚರಣೆಯಿಂದ ಬೆಂಕಿ ಮತ್ತಷ್ಟು ಹರಡುವುದನ್ನು ತಡೆಯಲು ಸಾಧ್ಯವಾಯಿತು. ಆದರೆ, ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಎಲ್ಲಾ ದಿನಸಿ ವಸ್ತುಗಳು, ಕಟ್ಟಡ ಮತ್ತು ಸುಮಾರು 1 ಲಕ್ಷ ರೂಪಾಯಿ ನಗದು ಸುಟ್ಟು ಭಸ್ಮವಾಗಿದೆ . ಒಟ್ಟು 5 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ