ಪಣಂಬೂರು, ಜ. 05 : ಪ್ರೈವುಡ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

ಪಣಂಬೂರು, ಜ. 05 : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಪ್ರೈವುಡ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಸಂಭವಿಸಿರುವ ಘಟನೆ ವರದಿಯಾಗಿದೆ.

Advertisement

ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರಿಯಲ್ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್‌ ಎಂಬ ಪ್ರೈವುಡ್ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕಂಪೆನಿಯಲ್ಲಿದ್ದ ಪ್ರೈವುಡ್‌ಗಳು ಸುಟ್ಟು ಭಸ್ಮವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆ ಬೆಳಗ್ಗಿನ ಜಾವ ನಡೆದಿರುವ ಪರಿಣಾರ ಕೆಲಸಗಾರರು ಯಾರೂ ಇದ್ದಿರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಪಣಂಬೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಎಂ.ಸಿ.ಎಫ್, ಎನ್ ಎಂ ಪಿ ಎ ಹಾಗೂ ಅಗ್ನಿಶಾಮಕದಳದ ನಾಲ್ಕು ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.