ಮಧ್ಯಪ್ರದೇಶ : ಸಕಾಲದಲ್ಲಿ ಆಂಬುಲೆನ್ಸ್ ಸಿಗದೆ ಗರ್ಭಿಣಿ ಪರದಾಟ – ಆಟೋರಿಕ್ಷಾದಲ್ಲೇ ನಾಲ್ಕು ಮಕ್ಕಳಿಗೆ ಜನ್ಮ ಆದರೆ …?

"Feet of a newborn baby sleeping on white blanket. Soft focus, very shallow DOF."
Advertisement

ಮಧ್ಯಪ್ರದೇಶ, ಜು. 8 : ಸಕಾಲದಲ್ಲಿ ಆಂಬುಲೆನ್ಸ್ ಸಿಗದೆ ಗರ್ಭಿಣಿಯೊಬ್ಬರು ಆಟೋರಿಕ್ಷಾದಲ್ಲೇ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದರೆ, ದುರದೃಷ್ಟವಶಾತ್ ಜನಿಸಿದ ಕೆಲವೇ ಕ್ಷಣಗಳಲ್ಲಿ ನಾಲ್ಕೂ ನವಜಾತ ಶಿಶುಗಳು ಕೊನೆಯುಸಿರೆಳೆದಿರುವ ಅತ್ಯಂತ ಕರುಣಾಜನಕ ಘಟನೆ ಮಂಡ್ಲಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ.

Advertisement

ಸಕಾಲದಲ್ಲಿ ಆಂಬುಲೆನ್ಸ್ ಸೇವೆ ಲಭಿಸುತ್ತಿದ್ದರೆ ನವಜಾತ ಶಿಶುಗಳು ಬದುಕುಳಿಯುತ್ತಿದ್ದವು. ಆದರೆ, ಆಂಬುಲೆನ್ಸ್ ಸಿಗದೆ ಇರುವುದು ಮಕ್ಕಳ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ತಾಯಿ ಏಳನೇ ತಿಂಗಳಿಗೇ ಅಕಾಲಿಕ ಹೆರಿಗೆಯಾಗಿದ್ದರಿಂದ ಮತ್ತು ಮಕ್ಕಳ ದೇಹ ಪೂರ್ಣವಾಗಿ ಬೆಳವಣಿಗೆಯಾಗದ ಕಾರಣ ಶಿಶುಗಳು ಮೃತಪಟ್ಟಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆನ್ನಲಾಗಿದೆ.

Advertisement

ಮಂಡ್ಲಾ ಜಿಲ್ಲೆಯ ನೈಗಾಂವ್ ನಿವಾಸಿಯಾಗಿರುವ ರಜನಿ ಸಿಂಗ್ರಾಮ್ ಎಂಬುವವರಿಗೆ ಏಳನೇ ತಿಂಗಳ ಗರ್ಭಾವಸ್ಥೆಯಲ್ಲಿ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಕುಟುಂಬಸ್ಥರು ಸರ್ಕಾರಿ ತುರ್ತು ಆಂಬುಲೆನ್ಸ್ ಸೇವೆಗೆ ಕರೆ ಮಾಡಿದ್ದರು. ಆದರೆ, ಆಂಬುಲೆನ್ಸ್ ಬಾರದೇ ಇದ್ದುದ್ದರಿಂದ ಕಂಗಾಲಾದ ಕುಟುಂಬ ತಕ್ಷಣ ಖಾಸಗಿ ವಾಹನವೊಂದರ ಮೂಲಕ ಗುಥಾಸ್ (Ghuthas)ನಲ್ಲಿರುವ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ಗರ್ಭಿಣಿ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಿರುವುದರಿಂದ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಬಿಚ್ಚಿಯಾ (Bichhiya)ದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ.

ಬಿಚ್ಚಿಯಾ (Bichhiya)ದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲೂ ಕೂಡಾ ಆಂಬುಲೆನ್ಸ್ ಸೇವೆ ಸಿಗದ ಕಾರಣ ಅನಿವಾರ್ಯವಾಗಿ ಗರ್ಭಿಣಿಯನ್ನು ಆಟೋರಿಕ್ಷಾದಲ್ಲಿ ಬಿಚ್ಚಿಯಾ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ತೆರಳುವ ದಾರಿ ಮಧ್ಯೆ ಆಟೋರಿಕ್ಷಾದಲ್ಲೇ ರಜನಿ ಅವರು ಮೂರು ಹೆಣ್ಣು ಮತ್ತು ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಅವಧಿಗೂ ಮುನ್ನವೇ ಜನಿಸಿದ್ದರಿಂದ ಹಾಗೂ ತೂಕ ಕೇವಲ 1.5 ಕೆ.ಜಿ ಇದ್ದ ಕಾರಣ ಸಂಪೂರ್ಣವಾಗಿ ಅಂಗಾಂಗ ಬೆಳವಣಿಗೆಯಾಗದೆ ಮೃತಪಟ್ಟಿವೆ. ಸದ್ಯ ತಾಯಿಯ ಆರೋಗ್ಯ ಸ್ಥಿರವಾಗಿದ್ದು, ಬಿಚ್ಚಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಡಿ. ಜೆ. ಮೊಹಂತಿ ತಿಳಿಸಿದ್ದಾರೆ.

ಈ ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಹಿಳೆಯ ಪತಿ ಗಣೇಶ್ ಸಿಂಗ್ರಾಮ್, ಸರ್ಕಾರಿ ಆಂಬುಲೆನ್ಸ್ ವ್ಯವಸ್ಥೆ ಸಕಾಲಕ್ಕೆ ಲಭ್ಯವಾಗಿದ್ದರೆ ತಮ್ಮ ನಾಲ್ಕು ಮಕ್ಕಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಕಣ್ಣೀರು ಹಾಕಿದ್ದಾರೆ. ಈ ಇಡೀ ಕರುಣಾಜನಕ ಘಟನೆ ಮತ್ತು ಕುಟುಂಬಸ್ಥರ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಲಾ ಜಿಲ್ಲಾಧಿಕಾರಿ ರಾಹುಲ್ ನಾಮದೇವ್ ಧೋತೆ, ಈ ವಿಷಯವಾಗಿ ತಮಗೆ ಇನ್ನೂ ಯಾವುದೇ ಲಿಖಿತ ದೂರು ಬಂದಿಲ್ಲ ಎಂದಿದ್ದಾರೆ. ಒಂದು ವೇಳೆ ಕುಟುಂಬಸ್ಥರಿಂದ ಅಧಿಕೃತ ದೂರು ಬಂದರೆ, ಇಡೀ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ