ಮುಂಬೈ : ಬ್ಯಾಂಕಾಕ್‌ನಿಂದ ಮುಂಬೈಗೆ 11.82 ಕೋಟಿ ಮೌಲ್ಯದ ಗಾಂಜಾ ಸಾಗಾಟ – ಮಾಡೆಲ್ ಬಂಧನ !

ಮುಂಬೈ, ಜೂ. 12 : ಅಕ್ರಮವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಬ್ಯಾಂಕಾಕ್‌ನಿಂದ ಮುಂಬೈಗೆ ಸಾಗಿಸುತ್ತಿದ್ದ ಮಾಡೆಲ್ ಒಬ್ಬರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿಯನ್ನು ಹರ್ಷ ಸನ್ನಿ (28) ಎಂದು ಗುರುತಿಸಲಾಗಿದೆ. ಈಕೆ 2025ರ ‘ಮಿಸಸ್ ಕೇರಳ’ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಆಕೆಯ ಬಳಿಯಿದ್ದ ಬರೋಬ್ಬರಿ 11 ಕೆಜಿ ತೂಕದ ಅತ್ಯಂತ ದುಬಾರಿ ಮೌಲ್ಯದ ‘ಹೈಡೋಪೋನಿಕ್ ಗಾಂಜಾ’ (Hydroponic Marijuana) ವಶಪಡಿಸಿಕೊಳ್ಳಲಾಗಿದ್ದು, ಇದರ ಅಂತರಾಷ್ಟ್ರೀಯ ಮಾರುಕಟ್ಟೆ ಬೆಲೆ ಸುಮಾರು 11.82 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಏನಿದು ಘಟನೆ?

ಕಸ್ಟಮ್ಸ್ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಹರ್ಷ ಸನ್ನಿ ಜೂನ್ 10-11 ರ ಮಧ್ಯರಾತ್ರಿ ಬ್ಯಾಂಕಾಕ್‌ನಿಂದ ಏರ್ ಇಂಡಿಯಾ ವಿಮಾನ (TG-351) ಮೂಲಕ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದರು. ಈ ವೇಳೆ ನಿಲ್ದಾಣದಲ್ಲಿ ವಾಡಿಕೆಯಂತೆ ನಿಗಾ ವಹಿಸಿದ್ದ ಏ‌ರ್ ಇಂಟೆಲಿಜೆನ್ಸ್ ಯುನಿಟ್ (AIU) ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳಿಗೆ ಈಕೆಯ ನಡವಳಿಕೆ ಮೇಲೆ ಅನುಮಾನ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆಕೆಯನ್ನು ತಡೆದು ತಪಾಸಣೆ ನಡೆಸಿದ್ದಾರೆ.

ಟ್ರಾಲಿ ಬ್ಯಾಗ್‌ನಲ್ಲಿತ್ತು ಕೋಟಿ ಕೋಟಿ ಮೌಲ್ಯದ ಡ್ರಗ್ಸ್:

ಆಕೆಯ ಟ್ರಾಲಿ ಬ್ಯಾಗ್ ಅನ್ನು ಸಂಪೂರ್ಣವಾಗಿ ಶೋಧಿಸಿದಾಗ, ವ್ಯಾಕ್ಯೂಮ್ ಸೀಲ್ ಮಾಡಲಾದ 12 ಪ್ಲಾಸ್ಟಿಕ್ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಅವುಗಳಲ್ಲಿ ಹಸಿರು ಬಣ್ಣದ ಪದಾರ್ಥವಿರುವುದು ಕಂಡುಬಂದಿದೆ. ತಕ್ಷಣವೇ ಸ್ಥಳದಲ್ಲೇ ಎನ್‌ಡಿಪಿಎಸ್‌ (NDPS) ಕಿಟ್ ಬಳಸಿ ರಾಸಾಯನಿಕ ಪರೀಕ್ಷೆ ನಡೆಸಿದಾಗ, ಅದು ಅತ್ಯಂತ ದುಬಾರಿ ಹಾಗೂ ಉನ್ನತ ಗುಣಮಟ್ಟದ ‘ಹೈಡೋಪೋನಿಕ್ ಗಾಂಜಾ’ ಎಂಬುದು ದೃಢಪಟ್ಟಿದೆ.

ನ್ಯಾಯಾಂಗ ಬಂಧನ

ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಒಟ್ಟು ತೂಕ 11 ಕೆಜಿಗೂ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು 11.82 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ನಿಷೇಧಿತ ಮಾದಕ ದ್ರವ್ಯಗಳನ್ನು ಸಾಗಿಸಿದ ಆರೋಪದ ಮೇಲೆ ಕಸ್ಟಮ್ಸ್ ಇಲಾಖೆಯು ಹರ್ಷ ಸನ್ನಿ ಅವರನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿದೆ. ಬಂಧಿತ ಹರ್ಷ ಸನ್ನಿ ಅವರು 2025 ರ ‘ಮಿಸಸ್ ಕೇರಳ’ ಸೌಂದರ್ಯ ಸ್ಪರ್ಧೆಯ ಸ್ಪರ್ಧಿಯಾಗಿದ್ದರು ಎಂಬುದು ತಿಳಿದುಬಂದಿದೆ. ಆರೋಪಿಯನ್ನು ಫೋರ್ಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುವನ್ನು ಮುಂಬೈ ಬಿಟ್ಟು ಬೇರೆ ಯಾವ ಭಾಗಕ್ಕೆ ತಲುಪಿಸಲು ಯೋಜಿಸಲಾಗಿತ್ತು ಮತ್ತು ಇದರ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.