ಕಾರ್ಕಳ, ಡಿ. 15 : ಕೆಸರುಗದ್ದೆಗೆ ಬಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ಡಿ.13ರಂದು ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಹಿರ್ಗಾನ ಗ್ರಾಮದ ದಯಾನಂದ ಮೂಲ್ಯ (52) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇವರು ತಮ್ಮ ಮನೆಯ ಹತ್ತಿರದಲ್ಲೇ ಸಣ್ಣ ಕ್ಯಾಂಟೀನ್ ಅನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದು ಕಳೆದ 25 ವರ್ಷಗಳಿಂದ ಮದ್ಯ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ. ಡಿ. 13ರಂದು ಕ್ಯಾಂಟೀನ್‌ನಿಂದ ಕೆಲಸ ಮುಗಿಸಿ ಮದ್ಯಪಾನ ಮಾಡಿಕೊಂಡು ಮನೆಗೆ ಹೋಗುವಾಗ ದಾರಿಯ ಬಳಿ ಇರುವ ಕೆಸರುಗದ್ದೆಯಲ್ಲಿ ಆಕಸ್ಮಿಕವಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

