ಕಾರ್ಕಳ : ಮದ್ಯಪಾನ ಮಾಡಿ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಗದ್ದೆಗೆ ಬಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

an Indian or Asian person laying dead with outstretched hand during COVID-19 or corona virus outbreak
Advertisement

ಕಾರ್ಕಳ, ಡಿ. 15 : ಕೆಸರುಗದ್ದೆಗೆ ಬಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ಡಿ.13ರಂದು ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಹಿರ್ಗಾನ ಗ್ರಾಮದ ದಯಾನಂದ ಮೂಲ್ಯ (52) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

Advertisement

ಇವರು ತಮ್ಮ ಮನೆಯ ಹತ್ತಿರದಲ್ಲೇ ಸಣ್ಣ ಕ್ಯಾಂಟೀನ್ ಅನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದು ಕಳೆದ 25 ವರ್ಷಗಳಿಂದ ಮದ್ಯ ಸೇವಿಸುವ ಚಟ ಹೊಂದಿದ್ದರು ಎನ್ನಲಾಗಿದೆ. ಡಿ. 13ರಂದು ಕ್ಯಾಂಟೀನ್‌ನಿಂದ ಕೆಲಸ ಮುಗಿಸಿ ಮದ್ಯಪಾನ ಮಾಡಿಕೊಂಡು ಮನೆಗೆ ಹೋಗುವಾಗ ದಾರಿಯ ಬಳಿ ಇರುವ ಕೆಸರುಗದ್ದೆಯಲ್ಲಿ ಆಕಸ್ಮಿಕವಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ