ಪುತ್ತೂರು : ಗಂಡ ಹೆಂಡತಿಯ ಜಗಳ – ಪತ್ನಿಯ ಸಾವಿನಲ್ಲಿ ದುರಂತ ಅಂತ್ಯ – ಪತಿ ಸ್ಥಿತಿ ಗಂಭೀರ !

Advertisement

ಪುತ್ತೂರು, ಮಾ. 20 : ಗಂಡ ಹೆಂಡತಿಯ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವು ಪತ್ನಿಯ ಸಾವಿನಲ್ಲಿ ದುರಂತ ಅಂತ್ಯ ಕಂಡ ಘಟನೆ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ನಡೆದಿದೆ. ಪತ್ನಿಯನ್ನು ಹತ್ಯೆಗೈದ ಬಳಿಕ, ಪತಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಗಂಡ ಹೆಂಡತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದಂತಹ ಜಗಳವು ತಾರಕಕ್ಕೇರಿ, ಹೆಂಡತಿಯನ್ನು ಗಂಡ ಹತ್ಯೆಗೈದಿದ್ದಾನೆ. ಹೆಂಡತಿಯನ್ನು ಹತ್ಯೆಗೈದ ಬಳಿಕ ಆತಂಕಗೊಂಡ ಗಂಡ ತಾನೂ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ.

Advertisement

ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ