ಬೆಳ್ತಂಗಡಿ : ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ ಚಿಕಿತ್ಸೆ ಫಲಿಸದೆ ಸಾವು

Advertisement

ಬೆಳ್ತಂಗಡಿ, ಮೇ. 25 : ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಕಳೆಂಜ ನಿವಾಸಿ ನೋಣಯ್ಯ ಗೌಡ ಅವರ ಪುತ್ರರಾದ ಗಣೇಶ್ ಗೌಡ ಅವರು ಕಾಯರ್ತಡ್ಕದಲ್ಲಿ ತಮ್ಮದೇ ಆದ ಗಣೇಶ್ ಸ್ಟುಡಿಯೋ ನಡೆಸುತ್ತಿದ್ದರು.

Advertisement

ಗಣೇಶ್ ಗೌಡ ಅವರು ಮೇ 24 ರಂದು ಉಜಿರೆಯಿಂದ ಕಕ್ಕಿಂಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದ್ದು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ