ಮಂಗಳೂರು : ಬೀಚ್ ನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ !

Advertisement

ಮಂಗಳೂರು, ಜು. 31 : 2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 74 ಸಾವಿರ ರೂ. ದಂಡ ವಿಧಿಸಿದೆ.

Advertisement

ಪ್ರಕರಣದಲ್ಲಿ ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲ್ಯಾನ್ (28) ಹಾಗೂ ಅಬ್ದುಲ್ ರಿಯಾಜ್ (40) ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ.

Advertisement

2018ರ ನವೆಂಬರ್ 18ರಂದು ಯುವತಿಯೊಬ್ಬಳು ತನ್ನ ಗೆಳೆಯನೊಂದಿಗೆ ಬೀಚ್‌ಗೆ ತೆರಳಿದ್ದ ವೇಳೆ, ಮೂವರು ಅಪ್ರಾಪ್ತ ವಯಸ್ಸಿನ ಬಾಲಕರು ಸೇರಿದಂತೆ ಒಟ್ಟು ಏಳು ಮಂದಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಮಹಿಳಾ ಠಾಣೆಯ ಅಂದಿನ ಪೊಲೀಸ್ ನಿರೀಕ್ಷಕಿ ಕಲಾವತಿ ಕೆ. ಹಾಗೂ ಅಂದಿನ ಎಸಿಪಿ ಮಂಜುನಾಥ ಶೆಟ್ಟಿ ಸಮಗ್ರವಾಗಿ ನಡೆಸಿದ್ದರು. ಬಳಿಕ ಅಂದಿನ ಎಸಿಪಿ ಶ್ರೀನಿವಾಸ ಗೌಡ ಆರ್. ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ ವಿ.ಎನ್., ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ, ನಾಲ್ವರಿಗೆ 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಅಭಿಯೋಜನೆ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ಅಪ್ರಾಪ್ತ ವಯಸ್ಸಿನ ಬಾಲಕರ ವಿರುದ್ಧದ ವಿಚಾರಣೆ ಪ್ರಸ್ತುತ ಬಾಲ ನ್ಯಾಯ ಮಂಡಳಿಯಲ್ಲಿ ಮುಂದುವರಿಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ