ಕುಂದಾಪುರ : ಗಾರೆ ಕಾರ್ಮಿಕನ ಬದುಕಿನಲ್ಲಿ ವಿಧಿಯಾಟ – ಕ್ಯಾನ್ಸರ್ ಪೀಡಿತ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಮಗ ಮಸಣ ಸೇರಿದ !

Advertisement

ಕುಂದಾಪುರ, ಮಾ. 24 : ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಶವಾದ ಪರಿಣಾಮ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂದಾಪುರದ ಕಡ್ಲಿಮನೆ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ಕುಂದಾಪುರ ತಾಲೂಕಿನ ಮೂಡ್ಲಕಟ್ಟೆ ಸಮೀಪದ ಕಂದಾವರ ಸಾಂತಾವರ ನಿವಾಸಿ ಶಿವರಾಜ್ (35) ಮೃತರು ಎಂದು ಗುರುತಿಸಲಾಗಿದೆ. ಇವರು ಕಳೆದ 15 ವರ್ಷಗಳಿಂದ ಗಾರೆ ವೃತ್ತಿಮಾಡಿಕೊಂಡಿದ್ದರು.

Advertisement

ಘಟನೆ ವಿವರ : ಕುಂದಾಪುರ ಹೊರವಲಯದ ಕಡ್ಲಿಮನೆ ರಸ್ತೆಯ ಕೊನೆಯಲ್ಲಿ ಪ್ರವೀಣ್ ಖಾರ್ವಿ ಎನ್ನುವರ ನಿರ್ಮಾಣ ಹಂತದಲ್ಲಿರುವ ಮನೆಯ ಗಾರೆ ಕೆಲಸಕ್ಕೆ ಸೋಮವಾರ ಶಿವರಾಜ್ ಹಾಗೂ ಇತರರು ಬಂದಿದ್ದು ತನ್ನ ಜೊತೆ ಕೆಲಸ ಮಾಡುವ ಇನ್ನಿಬ್ಬರು ಕೆಲಸಗಾರರೊಂದಿಗೆ ಕಬ್ಬಿಣದ ಏಣಿಯನ್ನು ಎತ್ತಿ ಬೇರೆ ಕಡೆಗೆ ಹೊತ್ತೊಯ್ಯು ವಾಗ ಆಕಸ್ಮಿಕವಾಗಿ ಏಣಿಯು ಆಯತಪ್ಪಿ ಅಲ್ಲಿಯೇ ಹಾದು ಹೋಗಿರುವ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್ ತಗುಲಿದ್ದರಿಂದ ಶಿವರಾಜ್ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿ ತಾದರೂ ಅಷ್ಟರಲ್ಲಾಗಲೇ ಶಿವರಾಜ್ ಮೃತಪಟ್ಟಿದ್ದರು. ಘಟನೆಯಲ್ಲಿ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಮೃತ ಶಿವರಾಜ್ ಅವರು ಅವಿವಾಹಿತರಾಗಿದ್ದರು.

ತಂದೆಗೆ ನಾಳೆ ಆಸ್ಪತ್ರೆ ಹೋಗೋಣ ಎಂದಿದ್ದ ಶಿವರಾಜ್

ಕಡುಬಡತನದಿಂದ ಇರುವ ಕುಟುಂಬಕ್ಕೆ ಇದ್ದ ಆಧಾರ ಸ್ತಂಭವಾಗಿದ್ದ ಶಿವರಾಜ್ ಅಗಲಿಕೆ ಮತ್ತಷ್ಟು ನೋವುಂಟು ಮಾಡಿದೆ. ತಂದೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದು, ಅವರನ್ನು ಚಿಕಿತ್ಸೆಗೆ ಸೋಮವಾರ ಕರೆದುಕೊಂಡು ಹೋಗಬೇಕಾಗಿದ್ದ ಶಿವರಾಜ್ ಹಣದ ತೊಂದರೆಯಿಂದಾಗಿ ನಾಳೆ ಹೋಗುವ ಎಂದು ಕೆಲಸಕ್ಕೆ ಹೋಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ವಿಧಿಯ ಆಟವೇ ಬೇರೆ ಆಗಿತ್ತು. ಅವರು ವಿದ್ಯುತ್ ಶಾಕ್‌ಗ್ ಬಲಿ ಆದರು.
ಕುಂದಾಪುರ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಪುಷ್ಪಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಮೃತರ ಸಹೋದರ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ