ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟ – ಏಳು ಮಂದಿ ಗಂಭೀರ

ಕೊಪ್ಪಳ, ಡಿ. 12 : ಅಡುಗೆ ಅನಿಲ ಸಿಲಿಂಡ‌ರ್ ಸ್ಪೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಗಂಗಾವತಿ ತಾಲೂಕಿನ ಹೆಬ್ಬಾಳದಲ್ಲಿ ಈ ಅವಘಡ ಸಂಭವಿಸಿದೆ.

Advertisement

ಇಂದು ಬೆಳಗ್ಗೆ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡ‌ರ್ ಏಕಾಏಕಿ ಸ್ಫೋಟಗೊಂಡಿದೆನ್ನಲಾಗಿದೆ. ಈ ವೇಳೆ ಮನೆಯಲ್ಲಿದ್ದ ರಾಜು, ದುರಗೆಪ್ಪ, ಸುರೇಶ್, ಹುಸೇನಮ್ಮ ನಾಗರಾಜ್, ವಿಷ್ಣು ಶ್ರೀಕಾಂತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡ‌ರ್ ಸ್ಫೋಟದ ತೀವ್ರತೆಗೆ ಮನೆ ಭಾಗಶಃ ಧ್ವಂಸಗೊಂಡಿದೆ. ಖಾಲಿಯಾದ ಬದಲಿಸಿ ಹೊಸ ಸಿಲಿಂಡ‌ರ್ ಅಳವಡಿಸಿದ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆಯಾದರೂ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.