ಸುಳ್ಯ : “ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ

Advertisement

ಸುಳ್ಯ, ಜು. 7 : ಪದ್ಮಶ್ರೀ ಪುರಸ್ಕೃತರಾಗಿದ್ದ, ತೂಗುಸೇತುವೆಗಳ ಸರದಾರ ಎಂದೇ ಹೆಸರುವಾಸಿಯಾಗಿದ್ದ ಸುಳ್ಯದ ಡಾ.ಗಿರೀಶ್ ಭಾರದ್ವಾಜ್ (76) ಅವರು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಇಂದು ಮುಂಜಾನೆ ತೀವ್ರ ಅಸ್ವಸ್ಥಗೊಂಡ ಅವರು, ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ದೇಶದಾದ್ಯಂತ 140 ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸುವ ತೂಗು ಸೇತುವೆಗಳ ಸರದಾರ ಎಂದು ಹೆಸರುವಾಸಿಯಾಗಿದ್ದರು. 2017ರಲ್ಲಿ ದೇಶ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂಜಿನಿಯರ್ ಪದವಿ ಪಡೆದ ಬಳಿಕ ಆಯಶ್ಯಿಲ್ಪ ಇಂಜಿನಿಯರಿಂಗ್ ವರ್ಕ್ಸ್ ಆರಂಭಿಸಿದ್ದ ಭಾರದ್ವಾಜ್ ಅವರು ಬಳಿಕ ತೂಗುಸೇತುವೆ ನಿರ್ಮಾಣ ಆರಂಭಿಸಿ ದೇಶ ವಿದೇಶಗಳಲ್ಲಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಪ್ರಸಿದ್ಧರಾಗಿದ್ದರು. ಪತ್ನಿ ದಿ.ಉಷಾ. ಪುತ್ರರಾದ ಸುದರ್ಶನ್, ಪತಂಜಲಿ, ಪುತ್ರಿ ರಷ್ಯಾ ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Advertisement

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕು, ಮಂಗಳೂರು ತಾಲ್ಲೂಕಿನ ಕುಪ್ಪೆಪದವಿನಲ್ಲಿ ನಿರ್ಮಾಣ ಮಾಡಿ ಹಳ್ಳಿ ಜನರಿಗೆ ನೆರವಾಗಿದ್ದರು. ಅವರ 100ನೇ ಸೇತುವೆಯು ಅಂದಿನ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಮನೆಯ ಸಮೀಪವಿರುವ ಸುಳ್ಯದ ಮಂಡೆಕೋಲಿನಲ್ಲಿ ನಿರ್ಮಾಣವಾಗಿತ್ತು. ಭಾರದ್ವಾಜ್ ಅವರ ತಂತ್ರಜ್ಞಾನದಿಂದ ಪ್ರಯೋಜನ ಪಡೆದ ಗ್ರಾಮಸ್ಥರು ಅವರನ್ನು ಸುಳ್ಯದ ವಿಶ್ವೇಶ್ವರಯ್ಯ, ಸೇತುವೆಗಳ ಸರ್ದಾರ್ ಎಂದೇ ಕರೆಯುತ್ತಿದ್ದರು. ಇವರ ತೂಗುಸೇತುವೆಗಳು ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ಮೂರು ರಾಜ್ಯಗಳಲ್ಲಿ ವ್ಯಾಪಿಸಿವೆ. ಇವರು ನಿರ್ಮಿಸುವ ಸೇತುವೆಗಳು ಸಾಂಪ್ರದಾಯಿಕ ಸೇತುವೆಗಳ ವೆಚ್ಚದ ಕೇವಲ 10ನೇ ಒಂದು ಭಾಗದಲ್ಲಿ ಸಿದ್ಧಪಡಿಸುತ್ತಿದ್ದರು. ಅಲ್ಲದೆ, ಸಾಮಾನ್ಯ ಸೇತುವೆ ಕಟ್ಟಲು ಮೂರು ವರ್ಷ ಬೇಕಾದರೆ, ಇವರ ತೂಗುಸೇತುವೆಗಳು ಕೇವಲ ಮೂರೇ ತಿಂಗಳಲ್ಲಿ ಸಿದ್ಧವಾಗುತ್ತಿದ್ದವು.

ಮಂಡ್ಯದ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಭಾರದ್ವಾಜ್, ಆರಂಭದಲ್ಲಿ ದೊಡ್ಡ ಸಂಸ್ಥೆಯೊಂದರ ಎಂಡಿ (ಮ್ಯಾನೇಜಿಂಗ್ ಡೈರೆಕ್ಟರ್) ಆಗಿ ಐಷಾರಾಮಿ ಜೀವನ ನಡೆಸುವ ಕನಸು ಕಂಡಿದ್ದರು. ಆದರೆ ಹಳ್ಳಿಯ ಸೇವೆಗಾಗಿ ಅವರು ಬ್ರಿಡ್ಜ್ ಕಟ್ಟುವ ಕಾಯಕದಲ್ಲಿ ನಿರತರಾದರು. ರಸ್ತೆ ಸಂಪರ್ಕವಿಲ್ಲದೆ, ಓಡಾಡಲು, ನಿತ್ಯದ ಜೀವನ ನಡೆಸಲು ಸಮಸ್ಯೆ ಎದುರಿಸುತ್ತಿದ್ದ ಕಡೆಗಳಲ್ಲಿ ತಮ್ಮ ವಿಶೇಷ ಕೌಶಲ್ಯ ಬಳಸಿ, ಬ್ರಿಡ್ಜ್ ಗಳನ್ನು ಕಟ್ಟಿ ನೆರವಾಗಿದ್ದಾರೆ. ಇವರ ಅಗಲಿಕೆಗೆ ಅಪಾರ ಸಂಖ್ಯೆಯ ಅಭಿಮಾನಿಗಲು ದುಃಖತಪ್ತರಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ