ಚಿಕ್ಕಮಗಳೂರು : ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ !

ಚಿಕ್ಕಮಗಳೂರು, ಏ. 10 : ಪ್ರಸಿದ್ದ ಚಂದ್ರದ್ರೋಣ ಪರ್ವತ ಶ್ರೇಣಿಯ ಚಾರಣಕ್ಕೆ ಬಂದು ನಾಪತ್ತೆಯಾದ್ದ ಕೇರಳ ಮೂಲದ 10ನೇ ತರಗತಿ ಬಾಲಕಿ ಶ್ರೀನಂದಾ (14) ಶವವಾಗಿ ಪತ್ತೆಯಾಗಿದ್ದಾಳೆ. 3ನೇ ದಿನದ ಶೋಧ ಕಾರ್ಯದ ವೇಳೆ ಬಾಲಕಿಯ ಮೃತದೇಹ ಪತ್ತೆಯಾಗಿದೆ.

Advertisement

ಶ್ರೀನಂದಾ ದತ್ತಪೀಠದ ಮಾಣಿಕ್ಯಾಧಾರ ತಪ್ಪಲಿನಲ್ಲಿ ನಾಪತ್ತೆಯಾಗಿದ್ದು, ಬಾಲಕಿಯ ತಾಯಿಯ ಕಿಡ್ನಾಪ್ ಆಗಿದ್ದಾಳೆ ಎಂದು ಹೇಳಿಕೆ ನೀಡಿದ್ದರು. ಆ ಕಾರಣ ಜಿಲ್ಲಾಡಳಿತ ಮತ್ತೊಂದು ಆಯಾಮದಲ್ಲಿ ಶೋಧಕ್ಕೆ ಮುಂದಾಗಿತ್ತು.

3 ದಿನಗಳ ಸತತ ಶೋಧ ಕಾರ್ಯಚರಣೆ ಬಳಿಕ ಇಂದು (ಎ.10) ಬಾಲಕಿಯ ಶವ ಪತ್ತೆಯಾಗಿದೆ. ಪ್ರಕರಣ ಸಂಬಂಧ ಕೇರಳದಿಂದ ನಾಲ್ವರು ಪೋಲಿಸರು ಆಗಮಿಸಿದ್ದರು. ಪೊಲೀಸರು,ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಎಸ್.ಡಿ.ಆ‌ರ್.ಎಫ್ ತಂಡದಿಂದ ಶೋಧ ಕಾರ್ಯದಲ್ಲಿ ಭಾಗಿಯಾಗಿದೆ. ಥರ್ಮಲ್ ಡೋನ್, ಡಾಗ್ ಸ್ಟ್ರಾಡ್ ಬಳಕೆ ಮಾಡಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಲಾಗಿತ್ತು.

ಘಟನೆಯ ವಿವರ:

ಕೇರಳದ ಪಾಲಕ್ಕಾಡ್‌ನಿಂದ ಸುಮಾರು 40 ಪ್ರವಾಸಿಗರ ತಂಡ ಚಿಕ್ಕಮಗಳೂರು ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಆಗಮಿಸಿತ್ತು. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಸಂಚರಿಸುತ್ತಿದ್ದ ವೇಳೆ ಬಾಲಕಿ ತಂಡದಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಳು. ಬುಧವಾರ ಬಾಲಕಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ, ತಡರಾತ್ರಿವರೆಗೂ ಹುಡುಕಾಟ ನಡೆಸಿತ್ತು. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿಗಳು ವಾಪಸ್ಸಾಗಿ ಮರು ದಿನ ಮತ್ತೆ ಶೋಧ ನಡೆಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.