ಉಪ್ಪಿನಂಗಡಿ : ಅಕ್ರಮ ಗೋ ಹತ್ಯೆ ಪ್ರಕರಣ – ಆರೋಪಿಯ ಮನೆ ಆವರಣ ಜಪ್ತಿ ಮಾಡಿದ ಪೊಲೀಸರು

ಉಪ್ಪಿನಂಗಡಿ, ಫೆ. 27: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.

ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಲ್ಲು ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪಿಎಸ್‌ಐ ಸುತೇಶ್‌ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆಯಾಗಿದೆ. ಅಲ್ಲದೆ ಸಮೀಪದಲ್ಲಿದ್ದ ಆಟೋರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ದೊರೆತಿದ್ದು, ಒಟ್ಟು 56 ಕೆಜಿ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 27/2026ರಂತೆ ಪ್ರಕರಣ ದಾಖಲಿಸಲಾಗಿದ್ದು , Karnataka Prevention of Slaughter and Preservation of Cattle Act 0 4 2 12 m Bharatiya Nyaya Sanhita ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ, ಆರೋಪಿಯಾಗಿರುವ ಹೆಚ್. ಅಬ್ದುಲ್ ರಹಿಮಾನ್ ಅವರ ಜಾನುವಾರು ವಧೆಗೆ ಬಳಸಲಾಗಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.