ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಭಾರೀ ಗುಡುಗು, ಮಿಂಚು ಸಹಿತ ಮಳೆ : ಸಿಡಿಲಿಗೆ ಮನೆ ಸಂಪೂರ್ಣ ಜಖಂ

ಬಂಟ್ವಾಳ, ಅ. 05 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾನೆ ವೇಳೆಯಲ್ಲಿ ಗುಡುಗು–ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿನ ಹೊಡೆತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ನಡೆದಿದೆ.

ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಾಗೇಶ್ ಕುಲಾಲ್ ಅವರ ಮನೆಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಸಿಡಿಲಿನ ತೀವ್ರ ಹೊಡೆತಕ್ಕೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿ ಗಾಜುಗಳು ಹಾನಿಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ.

ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮುಂಜಾನೆ ಗುಡುಗು–ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿನ ಆರ್ಭಟದಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಳೆಯಿಂದಾಗಿ ಕೆಲವು ಕಡೆ ಹಾನಿ ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು