ಬೆಳ್ತಂಗಡಿ : ಜ. 11ರಂದು ಬ್ರಹ್ಮಶ್ರೀ ಗುರುಭವನ ಕಿಲ್ಲೂರಿನಲ್ಲಿ ವಾರ್ಷಿಕ ಗುರು ಪೂಜೆ ಹಾಗೂ ವಲಯ ಮಟ್ಟದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

ಕಿಲ್ಲೂರು, ಜ. 09 : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ) ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು -ಮಲವಂತಿಗೆ ವತಿಯಿಂದ ವಾರ್ಷಿಕ ಗುರು ಪೂಜೆ ಹಾಗೂ ವಲಯ ಮಟ್ಟದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವು ಜನವರಿ 11ರಂದು ಬ್ರಹ್ಮಶ್ರೀ ಗುರುಭವನ ಕಿಲ್ಲೂರಿನಲ್ಲಿ ಜರುಗಲಿದೆ.

Advertisement

ಬೆಳಿಗ್ಗೆ 7 ವೈದಿಕ ಕಾರ್ಯಕ್ರಮಗಳು, ಬೆ. 9 ಗಂಟೆಗೆ ಪಂಚಾಮೃತ ಅಭಿಷೇಕ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರು ಪೂಜೆ, ಮಧ್ಯಾಹ್ನ 12-30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಮಹಾಪೂಜೆ ಆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ. ಬೆ. 11 ಗಂಟೆಗೆ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ)ಬೆಳ್ತಂಗಡಿ ಅಧ್ಯಕ್ಷರಾದ ಶ್ರೀ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವು ಜರುಗಲಿದೆ.

ಮಧ್ಯಾಹ್ನ 2 ಗಂಟೆಗೆ ವಲಯ ಮಟ್ಟದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಆರಂಭಗೊಳ್ಳಲಿದೆ. ಸಿ.ಎ ಬ್ಯಾಂಕ್ ಬಂಗಾಡಿ ಇದರ ಅಧ್ಯಕ್ಷರಾಗಿರುವ ಶ್ರೀ ಹರೀಶ್ ಸಾಲಿಯಾನ್ ಮೋರ್ತಾಜೆ ಇವರು ಉದ್ಘಾಟನೆ ನೆರವೇರಿಸಲಿದ್ದಾರೆ. ಜೊತೆಗೆ ಮಿತ್ತಬಾಗಿಲು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವಿಜಯ ಇವರು ಗೌರವ ಉಪಸ್ಥಿತಿ ಇರಲಿದ್ದಾರೆ.

ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮವು ಮೆಸ್ಕಾಂ ಮಂಗಳೂರು ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ಹಾಗೂ ಇನ್ನಿತರ ಗೌರವ ಅತಿಥಿಗಳ ಉಪಸ್ಥಿತಿಯಲ್ಲಿ ಜರುಗಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳು ನಿಮ್ಮ ನೆಚ್ಚಿನ ಧ್ವನಿ ನ್ಯೂಸ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.