ಬೆಂಗಳೂರು : ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

Advertisement

ಬೆಂಗಳೂರು, ಆ.14 : ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ. ಶಿವಕುಮಾರ್, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

Advertisement

ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವಂತೆ ಸೂಚನೆ ನೀಡಲಾಗಿದೆ. ಈ ಆದೇಶ ಇಂದೋ ಅಥವಾ ನಾಳೆಯೋ ಹೊರಬೀಳುವ ಸಾಧ್ಯತೆಯಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ