ಕಾಸರಗೋಡು : ಎಚ್1ಎನ್‌1 ಆತಂಕ – ತೀವ್ರ ಜ್ವರದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

Advertisement

ಕಾಸರಗೋಡು, ಜು. 29 : ಎಚ್1ಎನ್‌1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Advertisement

ಮೃತರನ್ನು ಕಾಸರಗೋಡು ಜಿಲ್ಲೆಯ ಅಜನೂರು ಮಾಣಿಕೊಟ್ಟೆಯ ನಿವಾಸಿ ಯಶೋದಾ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಅವರಿಗೆ ತೀವ್ರ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ, ಎಚ್1ಎನ್‌1 ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

Advertisement

ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಯಶೋದಾ ಮೃತಪಟ್ಟಿದ್ದಾರೆ. ಈ ನಡುವೆ, ಯಶೋದಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು ಏಳು ಮಂದಿಯಲ್ಲಿ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಂಡುಬಂದಿವೆ. ಆರೋಗ್ಯ ಇಲಾಖೆ ತಕ್ಷಣವೇ ಅವರ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಸೋಂಕು ದೃಢಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದೆ.

ಎಚ್1ಎನ್‌1 ವೈರಸ್ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಜನೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಸೋಂಕು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಅನಗತ್ಯವಾಗಿ ಜನಸಂದಣಿ ಪ್ರದೇಶಗಳಿಗೆ ತೆರಳುವುದನ್ನು ತಪ್ಪಿಸುವಂತೆ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಮೊದಲಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಪ್ರಯೋಗಾಲಯದ ಪರೀಕ್ಷಾ ವರದಿಯ ಬಳಿಕ ಸೋಂಕಿನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ