ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದಿಂದ ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ಡಾ. ರವೀಶ್ ಪಡುಮಲೆ’ಯವರಿಗೆ ಗೌರವ ಡಾಕ್ಟರೇಟ್

ಮಂಗಳೂರು, ಮಾ. 27 : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ ಕಾರ್ಯಕ್ರಮವು ಮಾ.28ರಂದು ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಯದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನದ ಮೇರು ಸಾಧಕ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.

Advertisement

ಹರೇಕಳ ಹಾಜಬ್ಬ


ಕಿತ್ತಳೆ ಮಾರಾಟ ಮಾಡಿ ಶಾಲೆ ಕಟ್ಟಿದ ಸಾಧಕ ಹರೇಕಳ ಹಾಜಬ್ಬ. ಮಂಗಳೂರಿನ ಹರೇಕಳ-ನ್ಯೂಪಡ್ಡು ಗ್ರಾಮದಲ್ಲಿ ಶಾಲೆಯನ್ನು ನಿರ್ಮಿಸುವ ಮೂಲಕ ಗ್ರಾಮೀಣ ಶಿಕ್ಷಣದಲ್ಲಿ ಕ್ರಾಂತಿ ಮಾಡಿದ ಹಾಜಬ್ಬ ಅವರಿಗೆ 2020ರಲ್ಲಿ ಪದ್ಮಶ್ರೀ ಪ್ರಶಸ್ತಿಯೂ ಒಲಿದು ಬಂದಿತ್ತು.

ಸೂರಿಕುಮೇರು ಗೋವಿಂದ ಭಟ್

ಸೂರಿಕುಮೇರು ಗೋವಿಂದ ಭಟ್ (1938-2026) ತೆಂಕುತಿಟ್ಟು ಯಕ್ಷಗಾನ ರಂಗದ ದಿಗ್ಗಜರಾಗಿದ್ದು, ದಶಾವತಾರಿ ಎಂದೇ ಬಿರುದು ಪಡೆದವರು. ದಕ್ಷಿಣ ಕನ್ನಡ ಜಿಲ್ಲೆಯವರಾದ ಇವರು 7 ದಶಕಗಳ ಕಾಲ, ವಿಶೇಷವಾಗಿ ಧರ್ಮಸ್ಥಳ ಮೇಳದಲ್ಲಿ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ರಕ್ತಬೀಜ, ಕೌರವ, ಭೀಷ್ಮ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಇವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ (2016) ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು ದೊರೆತಿವೆ.

ಡಾ. ರವೀಶ್ ಪಡುಮಲೆ


ಡಾ. ರವೀಶ್ ಪಡುಮಲೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವ ನರ್ತಕರಾಗಿದ್ದು, ಚಿಂತಕರು, ವಾಗಿ ಮತ್ತು ಶಿಕ್ಷಣ ತಜ್ಞರು. ಉಜಿರೆಯ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ದೈವ ನರ್ತನದ ಸಂಪ್ರದಾಯವನ್ನು ಪಾಲಿಸುತ್ತಾ, ಹಿಂದೂ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.