ಸುಳ್ಯ: ಪತ್ನಿ, ಅತ್ತೆಗೆ ಚಾಕುವಿನಿಂದ ಹಲ್ಲೆ ನಡೆಸಿ ಇಲಿಪಾಷಾಣ ಸೇವಿಸಿದ ಆರೋಪಿ; ಪ್ರಕರಣ ದಾಖಲು

Advertisement

ಸುಳ್ಯ, ಸೆ. 07 : ಪತ್ನಿ ಹಾಗೂ ಅತ್ತೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಆರೋಪಿಯು ಇಲಿಪಾಷಾಣ ಸೇವಿಸಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರು ಎಂಬಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

Advertisement

ಸೆ. 6 ರಂದು ಮಧ್ಯಾಹ್ನ ಸಮಯ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿ ಮುಕ್ಕೂರು ನಿವಾಸಿ ಗಣೇಶ (38) ಎಂಬಾತನು ಆತನ ಪತ್ನಿ ವಿನಿತಾ (32) ಹಾಗೂ ಆಕೆಯ ತಾಯಿ ಕುಸುಮಾ(50) ಎಂಬವರಿಗೆ ಯಾವುದೋ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿರುತ್ತಾನೆ.

Advertisement

ಗಾಯಗೊಂಡ ವಿನಿತಾ ಹಾಗೂ ಕುಸುಮಾ ರವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ರ‍್ತಚಿಕಿತ್ಸೆಗೆ ಒಳಗಾಗಿರುತ್ತಾರೆ. ಇನ್ನು ಆರೋಪಿಯು ಇಲಿಪಾಷಾಣ ಸೇವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾನೆ.

ಈ ಫಟನೆಯ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ