ಬೆಂಗಳೂರು : ಬಿ.ಕೆ ಹರಿಪ್ರಸಾದ್ ಕೆಪಿಸಿಸಿ’ಯ ನೂತನ ಅಧ್ಯಕ್ಷ ?

ಬೆಂಗಳೂರು, ಜೂ. 03 : ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮೇಜರ್ ಸರ್ಜರಿ ಆರಂಭಿಸಿದ್ದು, ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರನ್ನು ನೇಮಕಗೊಳಿಸಿದ್ದು ಗೊತ್ತೇ ಇದೆ. ಇದರ ಮಧ್ಯೆ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ ಅವರ ಸ್ಥಾನವನ್ನು, ಹೈಕಮಾಂಡ್ ಯಾರಿಗೆ ಹೊಣೆ ನೀಡಲಿದೆ ಎಂಬ ಪ್ರಶ್ನೆಗೆ ಇನ್ನೂ ಖಚಿತ ಉತ್ತರ ಸಿಕ್ಕಿಲ್ಲ.

Advertisement

ಈಗಾಗಲೇ ಕೆಪಿಸಿಸಿ’ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕಗೊಳಿಸಲು ಹೈಕಮಾಂಡ್ ಒಲವು ತೋರಿತ್ತು, ಆದರೆ ಈ ಬಗ್ಗೆ ಬಿಕೆ ಹರಿಪ್ರಸಾದ್ ಅವರೇ ತಮ್ಮ ನಿರ್ಧಾರವನ್ನು ಇನ್ನೂ ಕೂಡಾ ಹೈಕಮಾಂಡ್ ಗೆ ತಿಳಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಕೆಪಿಸಿಸಿ’ಯ ಅಧ್ಯಕ್ಷ ಸ್ಥಾನಕ್ಕೆ ಯಾರ ಹೆಸರು ಅಂತಿಮಗೊಂಡಿದೆ ಎಂಬುದು ಪ್ರಶ್ನಾರ್ಥಕವಾಗಿದೆ.

ಮೂಲಗಳ ಮಾಹಿತಿ ಪ್ರಕಾರ, ಬಿಕೆ ಹರಿಪ್ರಸಾದ್ ಅವರ ಹೆಸರೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಂತಿಮಗೊಂಡಿದ್ದು, ಆದರೆ ಬಿಕೆ ಹರಿಪ್ರಸಾದ್ ಅವರ ನಿರ್ಧಾರ ಇನ್ನೂ ಬಹಿರಂಗಪಡಿಸಿಲ್ಲ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಬಿಕೆ ಹರಿಪ್ರಸಾದ್ ಅವರು, ಅಧ್ಯಕ್ಷ ಸ್ಥಾನದ ಜೊತೆಯಲ್ಲಿ ಸಚಿವ ಸ್ಥಾನದ ಕನಸೂ ಕಾಣುತ್ತಿದ್ದಾರೆ. ಆದರೆ, ಇದಕ್ಕೆ ಹೈಕಮಾಂಡ್ ಒಪ್ಪುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.