ಭಾರೀ ಮಳೆ ಹಿನ್ನೆಲೆ : ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ, ಆ. 02 : ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 3ರಂದು ತುರ್ತು ಸಭೆ ನಡೆಯಲಿದೆ.

ಆಗಸ್ಟ್ 3, 2026ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.

ಈ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಟಾಸ್ಕ್ ಫೋರ್ಸ್ ತಂಡಗಳ ಮುಖ್ಯಸ್ಥರು, ರೋವರ್ಸ್ ಮತ್ತು ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

ಅಲ್ಲದೆ, ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪ್ರತಿನಿಧಿಗಳಿಗೂ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದ್ದು, ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಚೇರಿ ಶ್ರಮಿಕ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಶಿವಮೊಗ್ಗ : ಭಾರೀ ಮಳೆ ತೀರ್ಥಹಳ್ಳಿ ಬಳಿ ಗುಡ್ಡ ಕುಸಿತ : 3 ವರ್ಷದ ಮಗು, ಅಪ್ಪ ಅಮ್ಮ ಸಾವು!

⚠️ Contents are protected on this website.