ಹಾಸನ, ಏ. 30 : ಪ್ರಿವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ವರನೊಬ್ಬ ಧಾರುಣವಾಗಿ ಸಾ*ವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿ, ಮನು ಎಲ್.ಎನ್.(29) ಅಪಘಾತದಲ್ಲಿ ಮೃ*ತಪಟ್ಟ ದುರ್ದೈವಿ. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು.
ಮದುವೆಗೆ ಎರಡೂ ಕುಟುಂಬಗಳಲ್ಲಿ ಭಾರೀ ಸಿದ್ಧತೆಗಳು ನಡೆಯುತ್ತಿದ್ದವು. ಈ ನಡುವೆ ಇಂದು ಬೆಳಿಗ್ಗೆ ಮನು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮಕಾರಿನಲ್ಲಿ ಒಬ್ಬರೇ ಹೊರಟಿದ್ದರು. ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊ*ನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಸಿದ್ದಾರೆ.

