ಬಳಂಜ : ಶಾಲಾ ಮಕ್ಕಳನ್ನು ಟಿಪ್ಪರ್ ವಾಹನದಲ್ಲಿ ಕರೆದೊಯ್ದು ಅಧ್ಯಯನ ! – ಮುಖ್ಯ ಶಿಕ್ಷಕ ಅಮಾನತು

ಬಳಂಜ, ಫೆ. 12 : ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನುಬಾಹಿರವಾಗಿ ಸರಕು ಸಾಗಣೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆ ತೆರೆದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಭಾರ ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ ಫೆ.10ರಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಪಿಕಪ್ ಹಾಗೂ ಟಿಪ್ಪರ್ ವಾಹನದಲ್ಲಿ ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಬಳಿಯ ಅನಿಲ್ ಫಾರ್ಮ್‌ಗೆ ಕರೆದುಕೊಂಡು ಹೋಗಿ ಬಳಿಕ ವಾಪಸ್ ಶಾಲೆಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.

Advertisement

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ಪೋಷಕರು, ಪಿಕಪ್ ಮತ್ತು ಟಿಪ್ಪರ್ ಸೇರಿದಂತೆ ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನೂ ಕರೆದುಕೊಂಡು ಹೋಗಲು ಮೋಟಾರು ವಾಹನ ಕಾಯ್ದೆಯಡಿ ಅವಕಾಶವಿಲ್ಲದಿರುವಾಗ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿರುವುದು ಏಕೆ? ಅಲ್ಲದೆ, ಈ ರೀತಿ ಕರೆದುಕೊಂಡು ಹೋಗಿ ಶಾಲಾ ಮಕ್ಕಳಿಗೆ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ? ಎಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಪೊಲೀಸ್ ಇಲಾಖೆ ಮುಖ್ಯೋಪಾಧ್ಯಾಯ ಹಾಗೂ ಎರಡು ವಾಹನಗಳ ಚಾಲಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯೋಪಾಧ್ಯಯರ ಅಮಾನತು :

ಘಟನೆ ಬೆಳಕಿಗೆ ಬರುತ್ತಿದ್ದಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿಯವರು ಶಾಲೆಗೆ ಭೇಟಿಕೊಟ್ಟು ವರದಿಯನ್ನು ಪಡೆದಿದ್ದರು. ಇದೀಗ ಡಿಡಿಪಿಐ ಶಶಿಧರ್ ರವರು ಬಳಂಜ ಸರ್ಕಾರಿ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ರನ್ನು ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

⚠️ Contents are protected on this website.