ಬೆಳಗಾವಿ : ಪರೀಕ್ಷೆ ಬರೆಯಲು ಮನೆಯಿಂದ ಹೊರಡುತ್ತಿದ್ದ ವೇಳೆ ಹೃದಯಾಘಾತದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಚಿಕ್ಕೋಡಿ, ಫೆ. 28 : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.

Advertisement

​ಭೂಮಿಕಾ ಮಾಳಂಗಿ (17) ಮೃತ ದುರ್ದೈವಿ. ಪರೀಕ್ಷೆ ಬರೆಯಲು ತೆರಳಲು ಭೂಮಿಕಾ ಸಿದ್ಧಳಾಗುತ್ತಿದ್ದರು. ಸ್ನಾನ ಮುಗಿಸಿಕೊಂಡು ಹೊರಬರುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಗಾಬರಿಗೊಂಡ ಪೋಷಕರು ಮಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವಿದ್ಯಾರ್ಥಿನಿ ಭೂಮಿಕಾ ಕೊನೆಯುಸಿರೆಳೆದಿದ್ದಾರೆ.

ಪರೀಕ್ಷೆ ಬರೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಮಗಳ ಅಕಾಲಿಕ ಮರಣದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯಿಂದ ಬಂಬಲವಾಡ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ, ​ಈ ಘಟನೆಯು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಮಾರ್ಚ್ 17ರವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಪರೀಕ್ಷೆ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆಯೂ ಪಿಯು ಬೋರ್ಡ್ ಕಣ್ಣಿರಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.