ಉಳ್ಳಾಲ : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಅಯ್ಯಪ್ಪ ವೃತಧಾರಿ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿ

Advertisement

ಉಳ್ಳಾಲ, ಜ. 13 : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು ಎನ್ನಲಾಗಿದೆ.

Advertisement

ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಮೃತ ಚಂದ್ರಹಾಸ್ ಅವರು ಮೂಲತ: ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ