ಪಡುಬಿದ್ರೆ : ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿನ್ನದ ಸರ ಕಳವು ಪ್ರಕರಣ – ತಮಿಳುನಾಡು ಮೂಲದ ಮೂವರು ಕಳ್ಳಿಯರ ಬಂಧನ

Advertisement

ಪಡುಬಿದ್ರೆ, ಡಿ. 27 : ಹೆಜಮಾಡಿಯ ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸರವನ್ನು ಎಗರಿಸಿದ ತಮಿಳುನಾಡು ಮೂಲದ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಶೀಥಲ್, ಕಾಳಿಯಮ್ಮ ಮತ್ತು ಮಾರಿ (40) ಬಂಧಿತ ಆರೋಪಿಗಳು.

Advertisement

ಗರಡಿಯಲ್ಲಿ ನೇಮೋತ್ಸವ ನಡೆಯುತ್ತಿದ್ದ ಸಂದರ್ಭ ಮೂವರು ಕಳ್ಳಿಯರು ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಜನಸಂದಣಿಯ ಮಧ್ಯೆಯೇ ಎಗರಿಸಿದ್ದರು. ಈ ಕುರಿತ ವೀಡಿಯೊ ವೈರಲ್ ಆಗಿದ್ದು ಕಳ್ಳಿಯರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಇದೀಗ ತಮಿಳುನಾಡು ಮೂಲದ ಮೂವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಹಳ ಚಾಣಾಕ್ಷತನದಿಂದ ಚಿನ್ನದ ಸರ ಎಗರಿಸುವ ವೀಡಿಯೋ ಅಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದೇ ದೃಶ್ಯಾವಳಿಗಳನ್ನು ಸಾಕ್ಷಿಗಳನ್ನಾಗಿಟ್ಟುಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

Advertisement

ಪಡುಬಿದ್ರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ