ಉಜಿರೆ : ವಾಹನಗಳ “ಹೈ ಬೀಮ್” ಲೈಟ್ ವಿರುದ್ಧ ಪೊಲೀಸರ ಭರ್ಜರಿ ಕಾರ್ಯಾಚರಣೆ

ಉಜಿರೆ, ಜು. 20 : ವಾಹನಗಳ ಹೈಬೀಮ್ ಹಾಗೂ ತೀಕ್ಷ್ಣ ಬೆಳಕು ಸೂಸುವ ಹೆಡ್ಲೈಟ್ ಅಳವಡಿಸಿದ ವಾಹನಗಳ ವಿರುದ್ಧ ಬೆಳ್ತಂಗಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

Advertisement

ಹೈ ಬೀಮ್ ಹಾಗೂ ಅತಿ ಹೆಚ್ಚು ಪ್ರಖರವಾಗಿ ಬೆಳಗುವ ಲೈಟ್ ಗಳಿಂದ ಅತೀ ಹೆಚ್ಚು ಅಪಘಾತ ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಉಜಿರೆ ಪೇಟೆಯಲ್ಲಿ ಸಂಚಾರಿ ಠಾಣೆಯ ಪೊಲೀಸರು ಹೈ ಬೀಮ್ ಹಾಗೂ ಅತಿ ಹೆಚ್ಚು ಪ್ರಖರವಾಗಿ ಬೆಳಗುವ ಅಥವಾ ಕಣ್ಣುಕುಕ್ಕುವ ಎಲ್ಇಡಿ ಲೈಟ್ ಹೊಂದಿರುವ ವಾಹನಗಳ ವಿರುದ್ಧ ಕಾರ್ಯಾಚರಣೆ ನಡೆಸಿ, ದಂಡ ವಿಧಿಸಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಸ್ಐ ಕಿಶೋರ್ ಪಿ., ಎಸ್ಐ ಲಿಂಗಪ್ಪ ಜಗ್ಗಣ್ಣನವರ್, ಎಎಸ್ಐ ಹರಿಪ್ರಸಾದ್ ಹಾಗೂ ಎಎಸ್ಐ ಚಿನ್ನಪ್ಪ  ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಕಾರ್ಯಚಾರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.