ಬೆಂಗಳೂರು : ಅಪ್ರಾಪ್ತೆಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆಯೂ ಮಾನ್ಯವಲ್ಲ – ಅಪರಾಧಿಗೆಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ !

Advertisement

ಬೆಂಗಳೂರು, ಸೆ. 10 : ಅಪ್ರಾಪ್ತೆಯೊಂದಿಗೆ ನಡೆಯುವ ಸಮ್ಮತಿಯ ಲೈಂಗಿಕ ಕ್ರಿಯೆಯು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ. ಸಂತ್ರಸ್ತೆಯ ಸಮ್ಮತಿ ಸಿಕ್ಕಿದೆ ಎಂಬ ಕಾರಣಕ್ಕೆ ಕ್ರಿಮಿನಲ್ ಆರೋಪದಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಹೈಕೋರ್ಟ್, ಪೋಕೋ ಪ್ರಕರಣದ ಅಪರಾಧಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ, ಅಪರಾಧಿಗೆಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1.5 ಲಕ್ಷ ರೂ. ದಂಡ ವಿಧಿಸಿದೆ.

Advertisement

ಪೋಕ್ಸ ಪ್ರಕರಣದಲ್ಲಿ ಮಂಡ್ಯದ ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ಸಂತ್ರಸ್ತೆಯ ಪಾಲಕರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಬಿ. ಪ್ರಮೋದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

Advertisement

ಅಲ್ಲದೆ, ಸಂತ್ರಸ್ತೆಯ ಜನನ ಪ್ರಮಾಣಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಪ್ರಕಾರ ಘಟನೆ ನಡೆದಾಗ ಬಾಲಕಿಗೆ 16 ವರ್ಷ ವಯಸ್ಸಾಗಿತ್ತು ಎಂಬುದು ಸಾಬೀತಾಗಿದೆ. ಬಾಲಕಿ 18 ವರ್ಷಕ್ಕಿಂತ ಕಡಿಮೆಯಿದ್ದಾಗ ಆಕೆಯ ಸಮ್ಮತಿ ಇದೆಯೋ, ಇಲ್ಲವೋ ಎಂಬುದು ಕಾನೂನಿನಲ್ಲಿ ಮುಖ್ಯವಾಗುವುದಿಲ್ಲ. ಅಪ್ರಾಪ್ತಿಯ ಸಮ್ಮತಿಯನ್ನು ರಕ್ಷಣೆಯಾಗಿ ಪಡೆಯಲು ಅಪರಾಧಿಗೆ ಯಾವುದೇ ಹಕ್ಕಿರುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿ ವಿಚಾರಣಾ ನ್ಯಾಯಾಲಯದಲ್ಲಿ ಆರೋಪಿ ಮತ್ತು ಸಂತ್ರಸ್ತೆಯ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಡಿಎನ್ಎ ಪರೀಕ್ಷಾ ವರದಿಯು ಗರ್ಭಪಾತಗೊಳಿಸಿದ ಭ್ರೂಣಕ್ಕೆ ಆರೋಪಿಯೇ ಜೈವಿಕ ತಂದೆ ಮತ್ತು ಸಂತ್ರಸ್ತೆಯೇ ಜೈವಿಕ ತಾಯಿ ಎಂಬುದನ್ನು ನಿಖರವಾಗಿ ದೃಢಪಡಿಸಿದೆ. ಆದರೂ, ವಿಚಾರಣಾ ನ್ಯಾಯಾಲಯ ಸಂತ್ರಸ್ತೆಯ ವಯಸ್ಸು ಮತ್ತು ಡಿಎನ್ಎ ಸಾಕ್ಷ್ಯಗಳನ್ನು ಸರಿಯಾಗಿ ಪರಿಗಣಿಸದೆ, ಆರೋಪಿಯನ್ನು ಖುಲಾಸೆ ಮಾಡಿರುವುದು ಕಾನೂನುಬಾಹಿರ ಹಾಗೂ ತಪ್ಪು ನಿರ್ಧಾರ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೆ, ವಿಚಾರಣಾ ನ್ಯಾಯಾಲಯ ಸುಪ್ರೀಂಕೋರ್ಟ್‌ನ ಹಳೆಯ ಆದೇಶಗಳನ್ನು ಪರಿಗಣಿಸಿದ್ದು, ಫೋಕೋ ಕಾಯ್ದೆ ಜಾರಿ ಮಾಡಿರುವ ಉದ್ದೇಶವನ್ನು ಅರ್ಥೈಸಿಕೊಂಡಿಲ್ಲ ಎಂದಿರುವ ನ್ಯಾಯಪೀಠ, ಪೋಕೋ ಸೆಕ್ಷನ್ 6 ಮತ್ತು ಐಪಿಸಿ 376ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ. ಕಿಡ್ನಾಪ್ ಮಾಡಿದ ಆರೋಪದಲ್ಲಿ 5 ಸಾವಿರ ರೂ. ದಂಡ ಹಾಕಲಾಗಿದ್ದು, ದಂಡದ ರೂಪದಲ್ಲಿ ಸಂಗ್ರಹಿಸುವ 1.05 ಲಕ್ಷ ರೂ.ಗಳಲ್ಲಿ 90 ಸಾವಿರ ರೂ.ಗಳನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 15 ಸಾವಿರ ರೂ.ಗಳನ್ನು ಸರ್ಕಾರಕ್ಕೆ ಜಮಾ ಮಾಡಬೇಕು ಎಂದು ಆದೇಶಿಸಿದೆ.

ಅಲ್ಲದೆ, ಆರೋಪಿ ಆದೇಶದ ಪ್ರತಿ ಲಭ್ಯವಾದ ಒಂದು ವಾರದ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು. ಶರಣಾಗದಿದ್ದಲ್ಲಿ ತಕ್ಷಣವೇ ಆತನನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸಬೇಕು ಎಂದು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ