ಢಾಕಾ : ಬಾಂಗ್ಲಾದಲ್ಲಿ ಮುಂದುವರಿದ ಹಿಂಸಾಚಾರ – ಹಿಂದೂ ಶಿಕ್ಷಕನ ಮನೆಗೆ ಬೆಂಕಿ ಹಚ್ಚಿದ ಇಸ್ಲಾಮಿಕ್ ಗುಂಪು

ಢಾಕಾ : ಹಿಂಸಾಚಾರ ಪೀಡಿತ ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಇದೀಗ ಕಿಡಿಗೇಡಿಗಳು ಹಿಂದೂ ಶಿಕ್ಷಕನ ಮನೆಗೆ ಬೆಂಕಿ ಹಚ್ಚಿದ್ದಾರೆ. ಸಿಲೆಂಟ್‌ನ ಗೋವೈನ್ ಫಾಟ್ ಉಪ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಇಸ್ಲಾಮಿಕ್ ಗುಂಪೊಂದು ಬೀರೇಂದ್ರ ಕುಮಾರ್ ದೇವ್ ಎಂಬ ಶಾಲಾ ಶಿಕ್ಷಕನ ಮನೆಗೆ ಬೆಂಕಿ ಹಚ್ಚಿದ್ದು, ಸುಟ್ಟು ಕರಕಲಾಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ವಿಡಿಯೋದಲ್ಲಿ ಮನೆಯ ತುಂಬಾ ಬೆಂಕಿ ಆವರಿಸಿಕೊಂಡಿದ್ದು, ಈ ವೇಳೆ ಮನೆಯಲ್ಲಿ ಇರುವ ಕುಟುಂಬದ ಸದಸ್ಯರು ಹೊರ ಬರಲು ಪ್ರಯತ್ನಿಸುತ್ತಿದ್ದ ವೇಳೆ ಅಗ್ನಿಯ ಕೆನ್ನಾಲಿಗೆ ಇನ್ನಷ್ಟು ಹೆಚ್ಚಾಗಿದೆ. ಇದರಿಂದ ಹೊರ ಬಾರಲು ಸಾಧ್ಯವಾಗದೇ ಪರದಾಡಿದ್ದಾರೆ. ಈ ದೃಶ್ಯವನ್ನು ಪ್ರತ್ಯಕ್ಷವಾಗಿ ಕಂಡ ಅಕ್ಕ ಪಕ್ಕದಲ್ಲಿರುವ ಅಲ್ಪ ಸಂಖ್ಯಾತರು ಭಯಭೀತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಕಳೆದ ಒಂದು ತಿಂಗಳಿನಿಂದ 7 ಮಂದಿ ಹಿಂದೂಗಳ ಹತ್ಯೆ ನಡೆದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.