ಬಂಟ್ವಾಳ : ಹಿಟ್ ಯಾಂಡ್ ರನ್ – ದ್ವಿಚಕ್ರ ವಾಹನ ಸವಾರ ಗಂಭೀರ

Advertisement

ಬಂಟ್ವಾಳ, ಡಿ. 23 : ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು, ಪರಾರಿಯಾಗಿರುವ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಗಾಯಾಳು ಎಂದು ತಿಳಿದುಬಂದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎನ್ನಲಾಗಿದೆ.

Advertisement

ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು , ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಮಾಹಿತಿ ಕಲೆ ಹಾಕುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ