ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ – ಆರೋಗ್ಯ ಇಲಾಖೆಯಿಂದ ಕ್ರಮ !

ಬೆಂಗಳೂರು, ಜು. 27 : ಯುವ ಜನತೆಯಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.

Advertisement

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ಎನ್‌ಎಸಿಒ) ಹಾಗೂ ಇತರ ಸಂಸ್ಥೆಗಳ ವರದಿಗಳ ಪ್ರಕಾರ, ಹೆಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ೩ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 2.60 ಲಕ್ಷ ಮಂದಿ ಹೆಚ್‌ಐವಿ ಸೋಂಕಿತರಾಗಿದ್ದು, ಈ ಪೈಕಿ ಸುಮಾರು 2.05 ಲಕ್ಷ ಮಂದಿ ಆಂಟಿ ರೆಟ್ರೋ ವೈರಲ್ ಥೆರಪಿ (ಎಆರ್‌ಟಿ) ಪಡೆಯುತ್ತಿದ್ದಾರೆ. ಉಳಿದಂತೆ ಸುಮಾರು 54,000 ಮಂದಿಗೆ ತಾವು ಹೆಚ್‌ಐವಿ ಪೀಡಿತರಾಗಿರುವುದೇ ಅರಿವಿಲ್ಲ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, 18 ರಿಂದ 35 ವರ್ಷದೊಳಗಿನ ಯುವ ಸಮೂಹದಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. 18 ರಿಂದ 25 ವರ್ಷದ ಸುಮಾರು 7,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ, ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಈ ವಿಶೇಷ ಅಭಿಯಾನಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಸಹಕರಿಸಬೇಕು. ವಿದ್ಯಾರ್ಥಿಗಳ ಗೌಪ್ಯತೆ ಕಾಪಾಡುವ ಉದ್ದೇಶದಿಂದ ‘ನಿಮ್ಮ ಹೆಚ್‌ಐವಿ ಸ್ಥಿತಿ ತಿಳಿದುಕೊಳ್ಳಿ’ ಎಂಬ ಕ್ಯೂಆರ್ ಕೋಡ್ ಆಧಾರಿತ ಸ್ವಯಂ ಅಪಾಯ ಮೌಲ್ಯಮಾಪನ ವ್ಯವಸ್ಥೆಯನ್ನೂ ಪರಿಚಯಿಸಲಾಗುತ್ತಿದೆ. ಇದರ ಮೂಲಕ ವಿದ್ಯಾರ್ಥಿಗಳು ತಮ್ಮ ಹೆಚ್‌ಐವಿ ಅಪಾಯದ ಮಟ್ಟವನ್ನು ಗೌಪ್ಯವಾಗಿ ಮತ್ತು ಸುಲಭವಾಗಿ ಪರಿಶೀಲಿಸಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ಆರೋಗ್ಯ ಇಲಾಖೆ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಸೈಕೋ ಕಿಲ್ಲರ್ ಚೇತನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಬಂಟ್ವಾಳ ಪೊಲೀಸರ ವಶಕ್ಕೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ಲೇ ಸ್ಕೂಲ್‌ನಲ್ಲಿ ಚಡ್ಡಿಯಲ್ಲೇ ಮೂತ್ರ ವಿಸರ್ಜನೆ – 5 ವರ್ಷದ ಮಗುವಿನ ಖಾಸಗಿ ಅಂಗವನ್ನೇ ಸುಟ್ಟ ಶಿಕ್ಷಕಿ !

ಕರಾವಳಿ, ಟಾಪ್ ಸುದ್ದಿಗಳು

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿರುವ ಅವಿನಾಶ್ ಪೂಜಾರಿಗೆ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ” ನೆರವು

⚠️ Contents are protected on this website.