ತಾಯಿಯನ್ನು ಚಿಕಿತ್ಸೆಗೆ ಕರೆತಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಿದ ಆಸ್ಪತ್ರೆಯ ಸಿಬ್ಬಂದಿ

ವಿಜಯನಗರ, ಮೇ 09 : ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಸರಕಾರಿ ಆಸ್ಪತ್ರೆಯ ಸಿಬ್ಬಂದಿಯೋರ್ವ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು, ತಾಯಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್‌ ಮದಕರಿ (37) ಎಂಬ ವ್ಯಕ್ತಿ ಬಾಲಕಿ ಜೊತೆ ಪರಿಚಯ ಮಾಡಿಕೊಂಡಿದ್ದು, ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು.

ಬಾಗಲಕೋಟೆ ಸರಕಾರಿ ಆಸ್ಪತ್ರೆಯಲ್ಲಿ ಗ್ರೂಪ್‌ ʼಡಿʼ ನೌಕರನಾಗಿ ಕೆಲಸ ನಿರ್ವಹಿಸುತ್ತಿರುವ ಆರೋಪಿಯು ಬಾಲಕಿಯ ನಂಬಿಕೆಯನ್ನು ದುರುಪಯೋಗ ಪಡಿಸಿ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್‌ಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಮತ್ತು ಬರುವ ಔಷಧಿ ನೀಡಿ, ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತ ಬಾಲಕಿಯ ಕುಟುಂಬದವರು ಹೊಸಪೇಟೆ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಮಕ್ಕಳ ಮೇಲೆ ಲೈಂಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲು ಮಾಡಿ, ಆರೋಪಿಯನ್ನು ಬಂಧನ ಮಾಡಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ