ಹೋಟೆಲ್, ಮೆಡಿಕಲ್ ಸ್ಟೋರ್‌ಗಳಲ್ಲಿ ಕ್ಯೂಆರ್ ಕೋಡ್ ಅಳವಡಿಕೆ : ಯುಟಿ ಖಾದರ್ ಘೋಷಣೆ

Advertisement

ಬೆಂಗಳೂರು, ಆ. 17 : ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ ಕ್ಯೂಆರ್ ಕೋಡ್ ಅಳವಡಿಸಲಾಗುವುದು. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.

Advertisement

ಆಹಾರ ಇಲಾಖೆ ನಡೆಸಿದ ಕಾರ್ಯಾಚರಣೆಗಳ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಈ ವ್ಯವಸ್ಥೆ ರೂಪಿಸಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ” ಎಂದರು.

Advertisement

“ಬೆಂಗಳೂರಿನ ಹೋಟೆಲ್‌ಗಳ ಮೇಲಿನ ದಾಳಿ ಮುಂದುವರಿಯಲಿದೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್, ಪಿಜಿ, ಬಸ್ ನಿಲ್ದಾಣ, ಮದುವೆ ಮನೆ, ರೈಲ್ವೆ ಕ್ಯಾಂಟೀನ್ ಹಾಗೂ ವಿಮಾನಗಳಲ್ಲಿ ನೀಡುವ ಆಹಾರವನ್ನೂ ಪರಿಶೀಲಿಸಲಾಗುವುದು. ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಪತ್ತೆಯಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ” ಎಂದು ಹೇಳಿದರು.

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಹಾಗೂ 4 ಎಂಟರ್‌ಪ್ರೈಸ್ ರೆಸ್ಟೋರೆಂಟ್‌ಗಳ ಮೇಲೆ ಪರಿಶೀಲನೆ ನಡೆಸಲಾಗಿದೆ. ಆಹಾರ ಸುರಕ್ಷತಾ ಮತ್ತು ಆರೋಗ್ಯ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ 30 ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ. ತಪಾಸಣೆ ವೇಳೆ ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಹಲವು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ